ಕಾಂಗ್ರೆಸ್‍ ನ ಹಂಗಾಮಿ ಅಧ್ಯಕ್ಷೆಯಾಗಿ ಸೋನಿಯಾ ಗಾಂಧಿ ಆಯ್ಕೆ

ಭಾನುವಾರ, 11 ಆಗಸ್ಟ್ 2019 (08:10 IST)
ನವದೆಹಲಿ :  ರಾಹುಲ್ ಗಾಂಧಿ ಅವರ  ರಾಜೀನಾಮೆಯಿಂದ  ತೆರನಾಗಿದ್ದ ಕಾಂಗ್ರೆಸ್‍ ನ ಅಧ್ಯಕ್ಷ ಸ್ಥಾನಕ್ಕೆ ಇದೀಗ  ಸೋನಿಯಾ ಗಾಂಧಿ ಅವರನ್ನು  ಆಯ್ಕೆ ಮಾಡಲಾಗಿದೆ.

 


ದೆಹಲಿ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಶನಿವಾರ ರಾತ್ರಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಭೆಯಲ್ಲಿ ಕಾಂಗ್ರೆಸ್‍ ನ ಹಂಗಾಮಿ ಅಧ್ಯಕ್ಷೆಯಾಗಿ ಸೋನಿಯಾ ಗಾಂಧಿ ಅವರು ಆಯ್ಕೆ ಮಾಡಲಾಗಿದೆ. ಇನ್ನುಮುಂದೆ ಅವರ ನೇತೃತ್ವದಲ್ಲಿ ಪಕ್ಷ ಸಂಘಟನೆ ಮಾಡಲಾಗುತ್ತದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್ ತಿಳಿಸಿದ್ದಾರೆ.

 

ಕಾಂಗ್ರೆಸ್ ಅಧ್ಯಕ್ಷರ ಪಟ್ಟಿಯಲ್ಲಿ  ಮಲ್ಲಿಕಾರ್ಜುನ ಖರ್ಗೆ ಹಾಗೂ ಮುಕುಲ್ ವಾಸ್ನಿಕ್ ಸೇರಿದಂತೆ ಹಲವರ ಹೆಸರು  ಕೇಳಿಬಂದಿತ್ತು. ಆದರೆ ಇದೀಗ ಅಂತಿಮವಾಗಿ ಮತ್ತೆ ಕಾಂಗ್ರೆಸ್ ಅಧ್ಯಕ್ಷ ಪಟ್ಟವನ್ನು ಸೋನಿಯಾ ಗಾಂಧಿ ಅವರು ವಹಿಸಿಕೊಂಡಿದ್ದಾರೆ.

 

ಈ ಸಭೆಯಲ್ಲಿ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ, ಗುಲಾಂ ನಬಿ ಆಜಾದ್, ಎ.ಕೆ.ಆ್ಯಂಟನಿ, ಅಹ್ಮದ್ ಪಟೇಲ್, ಕೆ.ಸಿ.ವೇಣುಗೋಪಾಲ್ ಸೇರಿದಂತೆ ಅನೇಕ ನಾಯಕರು ಭಾಗವಹಿಸಿದ್ದರು. ಸಭೆಯ ಅಧ್ಯಕ್ಷತೆಯನ್ನು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ವಹಿಸಿಕೊಂಡಿದ್ದರು ಎನ್ನಲಾಗಿದೆ.

 

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಕುಡಿತಕ್ಕೆ ಚಿನ್ನಾಭರಣ ಕೊಡದ ತಂಗಿಯನ್ನೇ ಕೊಲ್ಲೋದಾ?