Publish Date: Tue, 27 Feb 2018 (10:06 IST)
Updated Date: Tue, 27 Feb 2018 (10:08 IST)
ಹುಬ್ಬಳ್ಳಿ: ಮಹದಾಯಿ ವಿಚಾರ ಕಗ್ಗಂಟಾಗಲು ಕಾರಣ ಕಾಂಗ್ರೆಸ್. ಈ ವಿಚಾರದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡಿದ್ದು ಅಂದಿನ ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಮಹದಾಯಿ ಬಗ್ಗೆ ರಾಹುಲ್ ಗಾಂಧಿ ಮಾತನಾಡಬೇಕು. ಆದರೆ ಅವರು ತಪ್ಪಿಸಿಕೊಂಡು ಓಡಾಡುತ್ತಿದ್ದಾರೆ ಎಂದು ಬಿಎಸ್ ವೈ ಆರೋಪಿಸಿದ್ದಾರೆ.
ಈ ನಡುವೆ ಇಂದು ಹುಬ್ಬಳ್ಳಿಯಲ್ಲಿ ಇಂದು ಬಿಜೆಪಿ ರೈತ ಸಮಾವೇಶ ನಡೆಯಲಿದ್ದು, ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ಇದಕ್ಕಾಗಿ ಭಾರೀ ಕಾರ್ಯಕರ್ತರು ಸೇರುವ ನಿರೀಕ್ಷೆಯಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ