Select Your Language

Notifications

webdunia
webdunia
webdunia
webdunia

ಸೋನಿಯಾ ಚಿಕಿತ್ಸೆಗಾಗಿ ವಿದೇಶಕ್ಕೆ ಹೋದರೆ ತಪ್ಪೇನು: ಸಿ.ಟಿ.ರವಿಗೆ ಸಿಎಂ ಟಾಂಗ್

ಸೋನಿಯಾ ಚಿಕಿತ್ಸೆಗಾಗಿ ವಿದೇಶಕ್ಕೆ ಹೋದರೆ ತಪ್ಪೇನು: ಸಿ.ಟಿ.ರವಿಗೆ ಸಿಎಂ ಟಾಂಗ್
ಬೆಂಗಳೂರು , ಶುಕ್ರವಾರ, 10 ಮಾರ್ಚ್ 2017 (14:14 IST)
ಸೋನಿಯಾ ಗಾಂಧಿ ವಿದೇಶಕ್ಕೆ ಹೋಗಬಾರದಾ? ಚಿಕಿತ್ಸೆಗಾಗಿ ವಿದೇಶಕ್ಕೆ ಹೋದರೆ ತಪ್ಪೇನು ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ಮುಖಂಡ ಸಿ.ಟಿ.ರವಿಗೆ ತಿರುಗೇಟು ನೀಡಿದ್ದಾರೆ.
 
ಬಿಜೆಪಿಯವರು ಬೇಜವಾಬ್ದಾರಿ ವ್ಯಕ್ತಿಗಳು. ಮನಬಂದಂತೆ ಹೇಳಿಕೆ ನೀಡುವುದೇ ಅವರ ಕಾಯಕವಾಗಿದೆ. ಇನ್ನೊಬ್ಬರ ಆರೋಗ್ಯದ ಬಗ್ಗೆ ಕಾಳಜಿ ಹೊಂದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
 
 ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಮಾತನಾಡಿ, ಬಿಜೆಪಿಯವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಅವರಿಗೆ ಮಾನಸಿಕ ಆಸ್ಪತ್ರೆ ಆರಂಭಿಸುವಂತೆ ಆರೋಗ್ಯ ಸಚಿವರಿಗೆ ಮನವಿ ಮಾಡುತ್ತೇನೆ ಎಂದರು.
 
ಸಿ.ಟಿ ರವಿ ಹತಾಷರಾಗಿ ಟ್ವೀಟ್ ಮಾಡಿದ್ದಾರೆ. ಸೋನಿಯಾ ಗಾಂಧಿಯವರಿಗೆ ಎರಡು ಬಾರಿ ಪ್ರಧಾನಿಯಾಗುವ ಅವಕಾಶವಿತ್ತು. ಪ್ರಧಾನಿ ಸ್ಥಾನವನ್ನೇ ತಿರಸ್ಕರಿಸಿದ ಸೋನಿಯಾ ಗಾಂಧಿ ಧೀಮಂತ ಮಹಿಳೆ. ಅಂತಹ ನಾಯಕಿಯ ಬಗ್ಗೆ ಹೇಳಿಕೆ ನೀಡುವುದು ಸರಿಯಲ್ಲ ಎಂದು ಸಚಿವ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಮತ ಕೇಳುವ ನೈತಿಕ ಹಕ್ಕಿಲ್ಲಃ ಕುಮಾರಸ್ವಾಮಿ