Select Your Language

Notifications

webdunia
webdunia
webdunia
webdunia

ಮಹಾದಾಯಿ-ಮಲಪ್ರಭಾ ಸಮಸ್ಯೆಗೆ ಸೋನಿಯಾ ಕಾರಣ: ಯಡಿಯೂರಪ್ಪ

ಕಾಂಗ್ರೆಸ್
ರಾಜ್ಯದಲ್ಲಿ ಕಾಣಿಸಿಕೊಂಡಿರುವ ಮಲಪ್ರಭಾ-ಮಹಾದಾಯಿ ಸಮಸ್ಯೆಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೇ ಕಾರಣ ಎಂಬುದಾಗಿ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ, ಶಿವಮೊಗ್ಗ ಸಂಸದ ಬಿ.ಎಸ್.ಯಡಿಯೂರಪ್ಪ ಅವರು ಇಂದು ಆರೋಪಿಸಿದ್ದಾರೆ. 
 
ನಗರದ ತಮ್ಮ ನಿವಾಸದಲ್ಲಿ ರೈತ ಮುಖಂಡರೊಂದಿಗೆ ಸಭೆ ನಡೆಸಿದ ಅವರು, ಮಾಧ್ಯಮಗಳೊಂದಿಗೆ ಮಾತನಾಡಿದರು. ಈ ವೇಳೆ ರಾಜ್ಯದಲ್ಲಿ ಮಲಪ್ರಭಾ-ಮಹಾದಾಯಿ ನದಿ ಜೋಡಣೆಗೆ ಒತ್ತಾಯಿಸಿ ಕುಡಿಯಯುವ ನೀರಿಗಾಗಿ ಕಳೆದ ಹಲವು ವರ್ಷಗಳಿಂದ ನಡೆಸಲಾಗುತ್ತಿರುವ ಹೋರಾಟದಲ್ಲಿ ಸಫಲತೆ ಕಾಣದೆ ಸಮಸ್ಯೆಯಾಗಿಯೇ ಉಳಿಯಲು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಕಾರಣ. ನಾವು ಯೋಜನೆಯನ್ನು ಜಾರಿಗೊಳಿಸಲು ಸಹಕಾರ ನೀಡಿಲಿದ್ದೇವೆ. ಈ ಹಿನ್ನೆಲೆಯಲ್ಲಿ ಗೋವಾ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿಗಳ ಮನವೊಲಿಸಲಿದ್ದೇವೆ. ಆದರೆ ಅಲ್ಲಿನ ಕಾಂಗ್ರೆಸ್ ನಾಯಕರನ್ನು ಮನವೊಲಿಸುವ ಪ್ರಾಮಾಣಿಕ ಪ್ರಯತ್ನ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ಮಾಡಲಿ ಎಂದರು. 
 
ಇದೇ ವೇಳೆ, ಬಿಜೆಪಿಯ ಎಲ್ಲಾ ನಾಯಕರೂ ಕೂಡ ಸಮಸ್ಯೆಗೆ ಸ್ಪಂಧಿಸುತ್ತಿದ್ದಾರೆ. ಆದರೆ ಸಿಎಂ ಸಿದ್ದರಾಮಯ್ಯ ಅವರು ಮಾತ್ರ ಸಂಪುಟ ವಿಸ್ತರಣೆ, ಪುನರ್ ರಚನೆ ಎಂದು ಹೇಳಿಕೊಂಡು ಕಾಲ ಕಳೆಯುತ್ತಿದ್ದಾರೆ ಎಂದು ಆರೋಪಿಸಿದ ಅವರು, ಸೆ.28ರಂದು ನರಗುಂದದಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ತೂನೂ ಕೂಡ ಭಾಗಿಯಾಗಿ ಹೋರಾಟಕ್ಕೆ ಸಾಥ್ ನೀಡಲಿದ್ದೇನೆ ಎಂದು ಸ್ಪಷ್ಟಪಡಿಸಿದರು. 

Share this Story:

Follow Webdunia kannada