Select Your Language

Notifications

webdunia
webdunia
webdunia
webdunia

ಇಂದು ಹುಬ್ಬಳ್ಳಿಯಲ್ಲಿ ಸೋನಿಯಾ ಸವಾರಿ

ಇಂದು ಹುಬ್ಬಳ್ಳಿಯಲ್ಲಿ ಸೋನಿಯಾ ಸವಾರಿ
ಹುಬ್ಬಳ್ಳಿ , ಶನಿವಾರ, 6 ಮೇ 2023 (21:00 IST)
ಇಂದು ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ ಹುಬ್ಬಳ್ಳಿಗೆ ಆಗಮಿಸಿ ಭರ್ಜರಿ ಪ್ರಚಾರ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ದೆಹಲಿಯಿಂದ ಹುಬ್ಬಳ್ಳಿಗೆ ಆಗಮಿಸಲಿರುವ ಸೋನಿಯಾ ಗಾಂಧಿ, ನಗರದ ಸೆಟ್ಲಮೆಂಟ್‌ನ ಹಾಕಿ ಮೈದಾನದಲ್ಲಿ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಜಗದೀಶ್​ ಶೆಟ್ಟರ್​ ಪರ ಮತಯಾಚಿಸಲಿದ್ದಾರೆ. ಸಾಯಂಕಾಲ 6 ಗಂಟೆಯವರೆಗೆ ಸಮಾವೇಶ ನಡೆಯಲಿದೆ. ಕಾರ್ಯಕ್ರಮ ಮುಗಿಸಿ ಮತ್ತೆ ಹುಬ್ಬಳ್ಳಿಯಿಂದ ದೆಹಲಿಗೆ ವಿಶೇಷ ವಿಮಾನದ ಮೂಲಕ ಪ್ರಯಾಣ ಬೆಳೆಸಲಿದ್ದಾರೆ. ಚುನಾವಣೆ ಘೋಷಣೆಯಾದ ಬಳಿಕ ಮೊಟ್ಟಮೊದಲ ಬಾರಿಗೆ ರಾಜ್ಯಕ್ಕೆ ಸೋನಿಯಾ ಗಾಂಧಿ ಬರುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಚಾಲುಕ್ಯರ ನಾಡಲ್ಲಿ ‘ನಮೋ’ ಮೋಡಿ