Select Your Language

Notifications

webdunia
webdunia
webdunia
webdunia

ಭಯೋತ್ಪಾದಕರನ್ನು ಹಿಡಿಯೋರಿಗೆ ಮರಿಗೌಡನನ್ನು ಹಿಡಿಯಲಾಗುವುದಿಲ್ಲವೇ: ಪರಮೇಶ್ವರ್ ತಿರುಗೇಟು

ಭಯೋತ್ಪಾದಕರನ್ನು ಹಿಡಿಯೋರಿಗೆ ಮರಿಗೌಡನನ್ನು ಹಿಡಿಯಲಾಗುವುದಿಲ್ಲವೇ: ಪರಮೇಶ್ವರ್ ತಿರುಗೇಟು
ಬೆಂಗಳೂರು , ಸೋಮವಾರ, 25 ಜುಲೈ 2016 (15:40 IST)
ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರಿಗೆ ಧಮ್ಕಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಯೋತ್ಪಾದಕರನ್ನು ಹಿಡಿಯೋರಿಗೆ ಸಿಎಂ ಆಪ್ತ ಮರಿಗೌಡನನ್ನು ಹಿಡಿಯಲಾಗುವುದಿಲ್ಲವೇ ಎಂದು ರಾಜ್ಯ ಗೃಹ ಖಾತೆ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.
 
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರಿಗೆ ಧಮ್ಕಿ ಹಾಕಿದ ಪ್ರಕರಣದ ಆರೋಪಿ ಮರಿಗೌಡ ಇನ್ನೂ ನಾಪತ್ತೆಯಾಗಿದ್ದಾನೆ. ಆತ ಅತಿ ಬುದ್ಧಿವಂತಿಕೆ ಪ್ರದರ್ಶನ ಮಾಡುತ್ತಿದ್ದಾನೆ. ಭಯೋತ್ಪಾದಕರನ್ನು ಹಿಡಿಯೋರಿಗೆ ಇವರನ್ನು ಹಿಡಿಯಲಾಗುವುದಿಲ್ಲವೇ. ಕೆಲ ಪ್ರಕರಣಗಳಲ್ಲಿ ಹೀಗಾಗುತ್ತೇ ಎನು ಮಾಡಲಾಗುವುದಿಲ್ಲ ಎಂದು ಹಾರಿಕೆಯ ಉತ್ತರ ನೀಡಿದ್ದಾರೆ.
 
ಜುಲೈ 3 ರಂದು ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರ ಕಾರು ಅಡ್ಡಗಟ್ಟಿ ಅವರಿಗೆ ಬೆದರಿಕೆ ಹಾಕಿದ್ದಲ್ಲದೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಸಿಎಂ ಆಪ್ತ ಮರಿಗೌಡ ವಿರುದ್ಧ ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮರಿಗೌಡ ವಿರುದ್ಧ ಪ್ರಕರಣ ದಾಖಲಾಗಿ 22 ದಿನಗಳು ಕಳೆದಿದ್ದರು ಆತನನ್ನು ಬಂಧಿಸಲು ಪೊಲೀಸರು ವಿಫಲರಾಗಿದ್ದರು.
 
ವೇತನ ಪರಿಷ್ಕರಣೆಗೆ ಆಗ್ರಹಿಸಿ ಸಾರಿಗೆ ಸಂಸ್ಥೆ ನೌಕರರು ಕೈಗೊಂಡಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕೆಲ ಸಣ್ಣ ಪುಟ್ಟ ಪ್ರಕರಣಗಳನ್ನು ಹೊರತುಪಡಿಸಿ ರಾಜ್ಯಾದ್ಯಂತ ಬಸ್‌ ಬಂದ್ ಶಾಂತಿಯುತವಾಗಿ ನಡೆದಿದೆ. ನಾಳೆಯೂ ಪ್ರತಿಭಟನೆ ಮುಂದುವರೆಯುವ ಸಾಧ್ಯತೆಗಳಿದ್ದು, ಶಾಂತಿ ಸುವ್ಯವಸ್ಥೆಗಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ರಾಜ್ಯ ಗೃಹ ಖಾತೆ ಸಚಿವ ಜಿ. ಪರಮೇಶ್ವರ್ ತಿಳಿಸಿದರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಮನಾಲಿಯಲ್ಲಿ 25 ವರ್ಷದ ಇಸ್ರೇಲ್ ಯುವತಿಯ ಮೇಲೆ ಗ್ಯಾಂಗ್‌ರೇಪ್