Select Your Language

Notifications

webdunia
webdunia
webdunia
webdunia

ನನ್ನ ಹೇಳಿಕೆಯಿಂದ ತಾಯಂದಿರಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುವೆ: ಕುಮಾರಸ್ವಾಮಿ

HDK
ಬೆಂಗಳೂರು: ಗ್ಯಾರಂಟಿಗಳಿಂದ ಕಾಂಗ್ರೆಸ್ ದಾರಿತಪ್ಪಿಸುತ್ತಿದೆ ಎಂದಿದ್ದೇನೆ ಹೊರತು ಹೆಣ್ಣು ಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂದು ಹೇಳಿಲ್ಲ. ನನ್ನ ಹೇಳಿಕೆಯಿಂದ ಯಾವುದೇ ಮಹಿಳೆಯರಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಜೆಡಿಎಸ್‌ ನಾಯಕ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಈ ಹೇಳಿಕೆ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಚ್‌ಡಿಕೆ ಅವರು, ನಾನು ನೀಡಿದ ಹೇಳಿಕೆಯನ್ನು ತಿರುಚಲಾಗಿದೆ.  ಹೀಗಾಗಿ ರಾಜ್ಯದ ತಾಯಂದಿರಿಗೆ ನೋವು ಆಗಿದ್ದರೆ ನಾನು ಮತ್ತೊಮ್ಮೆ ವಿಷಾದಿಸುತ್ತೇನೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ತುಮಕೂರಿನ ತುರವೇಕೆರೆಯಲ್ಲಿ ಪ್ರಚಾರದ ವೇಳೆ ಕಾಂಗ್ರೆಸ್ ವಿರುದ್ಧ ಟೀಕಿಸುವ ಭರದಲ್ಲಿ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರು ಮಹಿಳೆಯರ ಬಗ್ಗೆ ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. ಕಾಂಗ್ರೆಸ್ ನಾಯಕರು ಎಚ್‌ಡಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಅದಲ್ಲದೆ ಮಂಡ್ಯದ  ಕಾಂಗ್ರೆಸ್‌ನ ಮಹಿಳಾ ಕಾರ್ಯಕರ್ತರು ಎಚ್‌ಡಿಕೆ ವಿರುದ್ಧ ಪ್ರತಿಭಟನೆ ನಡೆಸಿ, ಗೋ ಬ್ಯಾಕ್ ಎಚ್‌ಡಿಕೆ ಘೋಷಣೆ ಕೂಗಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ಅವರು, ಮಂಡ್ಯದಲ್ಲಿ ನನ್ನ ವಿರುದ್ಧ ಮಹಿಳೆಯರಿಂದ ಗೋಬ್ಯಾಕ್ ಕುಮಾರಸ್ವಾಮಿ ಪ್ರತಿಭಟನೆ ಮಾಡಲಾಗಿದೆ. ಹಣ ಕೊಟ್ಟಿದ್ದಕ್ಕೆ‌ ಬಂದಿದ್ದೇವೆ ಎಂದು ಪ್ರತಿಭಟನೆಯಲ್ಲಿದ್ದ ಮಹಿಳೆಯರು ಹೇಳಿದ್ದಾರೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಹೇಮಮಾಲಿನಿ ಬಗ್ಗೆ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದರು. ಇದು ಮಹಿಳೆಯರಿಗೆ ಕೊಡುವ ಗೌರವವೇ? ಇವರು ಮಹಿಳೆಯರಿಗೆ ಗೌರವ ಕೊಡುವ ಮಹಾನುಭಾವರೇ? ಎಂದು ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ರಸ್ತೆ ಬದಿ ಮೂತ್ರ ವಿಸರ್ಜಿಸಿದ ಸಿಬ್ಬಂದಿಯಿಂದ ರಾಮೇಶ್ವರಂ ಕೆಫೆಗೆ ಸಂಕಷ್ಟ