Publish Date: Sun, 14 May 2023 (07:08 IST)
Updated Date: Sun, 14 May 2023 (07:11 IST)
ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ಜಯನಗರ ವಿಧಾನಸಭಾ ಕ್ಷೇತ್ರದ ಮರು ಮತಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ 16 ಮತಗಳ ಅಂತರದಿಂದ ಸೋತಿದ್ದಾರೆ.
ಬಿಜೆಪಿಯ ಸಿಕೆ ರಾಮಮೂರ್ತಿಗೆ ಗೆಲುವಾಗಿದೆ. ಮೊದಲು ಸೌಮ್ಯಾ ರೆಡ್ಡಿ 116 ಮತಗಳ ಅಂತರದಿಂದ ಗೆದ್ದಿದ್ದಾರೆ ಎಂದು ಘೋಷಣೆ ಮಾಡಲಾಗಿತ್ತು. ಆದರೆ ಮರು ಎಣಿಕೆಯಲ್ಲಿ ಸೋಲಾಗಿದೆ.
ಇದರಿಂದ ಸಿಟ್ಟಿಗೆದ್ದ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಧರಣಿ ಕುಳಿತಿದ್ದಾರೆ. ಇನ್ನು, ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಸೋಲಿನ ಬಳಿಕ ಕಣ್ಣೀರು ಹಾಕಿದ್ದು, ಕಾನೂನಿನ ಮೊರೆ ಹೋಗುವುದಾಗಿ ಹೇಳಿದ್ದಾರೆ.