Select Your Language

Notifications

webdunia
webdunia
webdunia
webdunia

ರಾಜ್ಯಕ್ಕೆ ಭಾರೀ ಮಳೆ ತರಲಿದೆ ನೈರುತ್ಯ ಮುಂಗಾರು

ಜುಲೈ.08ರ ನಂತರ ರಾಜ್ಯಕ್ಕೆ ಭಾರೀ ಮಳೆ ತರಲಿದೆ ನೈರುತ್ಯ ಮುಂಗಾರು; ಎಲ್ಲೆಲ್ಲಿ ಮಳೆ?

ರಾಜ್ಯಕ್ಕೆ ಭಾರೀ ಮಳೆ ತರಲಿದೆ ನೈರುತ್ಯ ಮುಂಗಾರು
ಬೆಂಗಳೂರು , ಗುರುವಾರ, 8 ಜುಲೈ 2021 (07:10 IST)
Karnataka Monsoon : ಮುಂಗಾರು ರಾಜ್ಯಕ್ಕೆ ಪ್ರವೇಶ ಪಡೆದು ಒಂದು ತಿಂಗಳಾಗಿದ್ದರೂ ಸಹ ಈ ವರೆಗೆ ಹೇಳಿಕೊಳ್ಳುವಂತಹ ಉತ್ತಮ ಮಳೆಯಾಗಿರಲಿಲ್ಲ. ಪಶ್ಚಿಮ ಘಟ್ಟ - ಮಲೆನಾಡನ್ನು ಹೊರತುಪಡಿಸಿ ಉಳಿದೆಡೆ ಸಾಧಾರಣ ಮಳೆಯಾಗಿದೆ. ಇನ್ನೂ ಬೆಂಗಳೂರು ಸೇರಿದಂತೆ ಹಲವೆಡೆ ಕಳೆದ ನಾಲ್ಕು ದಿನಗಳಿಂದ ಉತ್ತಮ ಮಳೆಯಾಗಿದ್ದರೂ ಸಹ ಜುಲೈ.07 ರಂದು ಮಳೆಯಾಗಿರಲಿಲ್ಲ. ಆದರೆ, ಜುಲೈ 7ರವರೆಗೂ ಮುಂಗಾರಿಗೆ ಸಮಯ ಸೂಕ್ತವಾಗಿಲ್ಲ. ಆನಂತರವಷ್ಟೇ ಹೆಚ್ಚಿನ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
 ಮುಂದಿನ ನಾಲ್ಕೈದು ದಿನಗಳಲ್ಲಿ ಮುಂಗಾರು ಚುರುಕಾಗುವುದಾಗಿ ತಿಳಿಸಲಾಗಿದೆ. ಜುಲೈನಲ್ಲಿ ಶೇ.94 -106 (ದೀರ್ಘಾವಧಿ ಸರಾಸರಿ) ಮಳೆ ಜುಲೈ ತಿಂಗಳ ಎರಡನೇ ವಾರದಲ್ಲಿ ನೈಋತ್ಯ ಮುಂಗಾರು ಚುರುಕು ಪಡೆಯಲಿದೆ. ಆಗ ದೇಶಾದ್ಯಂತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಮೃತ್ಯುಂಜಯ ಮಹೋಪಾತ್ರ ತಿಳಿಸಿದ್ದಾರೆ. .ಈ ವರ್ಷ ನೈಋತ್ಯ ಮುಂಗಾರು ದಕ್ಷಿಣ ಭಾರತ ಹಾಗೂ ಉತ್ತರ ಭಾರತದಲ್ಲಿ ಸಾಮಾನ್ಯ ರೀತಿ ಇರಲಿದ್ದು ಕೇಂದ್ರ ಪ್ರದೇಶದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಇರಲಿದೆ. ಆದರೆ ಭಾರತ ಪೂರ್ವ ಭಾಗದಲ್ಲಿ ಮತ್ತು ಈಶಾನ್ಯ ಭಾರತದಲ್ಲಿ ಸಾಮಾನ್ಯ ಪ್ರಮಾಣಕ್ಕಿಂತ ಕಡಿಮೆ ಮಟ್ಟದಲ್ಲಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ನೈಋತ್ಯ ಮುಂಗಾರಿನ ಕಾಲಾವಧಿಯಲ್ಲಿ(ಜೂನ್ನಿಂದ-ಸೆಪ್ಟೆಂಬರ್) ದೇಶಾದ್ಯಂತ ಮಳೆಯ ಪ್ರಮಾಣ ಸಾಮಾನ್ಯವಾಗಿರಲಿದೆ ಎಂದು ಮುನ್ಸೂಚನೆ ನೀಡಿದೆ.
ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಇಂದಿನಿಂದ ಮತ್ತೆ ಮಳೆ ಆರಂಭವಾಗಲಿದೆ. ಕರಾವಳಿ ಜಿಲ್ಲೆಗಳಲ್ಲೂ ವರುಣ ಆರ್ಭಟಿಸಲಿದ್ದಾನೆ. ಇನ್ನೆರಡು ದಿನ ಕರಾವಳಿಯಲ್ಲಿ ಗುಡುಗು ಸಹಿತ ಮಳೆ ಮುಂದುವರೆಯುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನಲ್ಲಿ ಇನ್ನೂ 3 ದಿನ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲೂ ಜುಲೈ 5ರವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ಮುನ್ಸೂಚನೆ ನೀಡಿದ್ದಾರೆ.
ಕಲ್ಯಾಣ ಕರ್ನಾಟಕದಲ್ಲಿ ಕಳೆದ ವಾರ ಜೋರಿದ್ದ ಮಳೆ ಈ ವಾರ ಇಳಿಕೆಯಾಗಿದೆ. ಆದರೆ, ನೈರುತ್ಯ ಮುಂಗಾರಿನಲ್ಲಿ ಈ ಭಾಗಕ್ಕೆ ಜುಲೈ.08ರ ನಂತರ ಉತ್ತಮ ಮಳೆಯಾಗಲಿದೆ ಎನ್ನಲಾಗುತ್ತಿದೆ.  ಉತ್ತರ ಒಳನಾಡಿನಲ್ಲಿ ಇಂದು ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇರಲಿದೆ. ನೈಋತ್ಯ ಮುಂಗಾರು ದುರ್ಬಲವಾದ್ದರಿಂದ ಕರಾವಳಿಯಲ್ಲಿ ಹೆಚ್ಚು ಮಳೆಯಾಗುತ್ತಿದೆ.
ಮಲೆನಾಡಿನಲ್ಲೂ ಇಂದು ಮಳೆಯಾಗಲಿದ್ದು, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 5ರವರೆಗೆ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಕೂಡ ಈ ವಾರಾಂತ್ಯದಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ನೆರೆಯ ರಾಜ್ಯಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ಕರ್ನಾಟಕದಲ್ಲೂ ಮಳೆ ಹೆಚ್ಚಾಗುತ್ತಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು, ಮೈಸೂರು, ಚಿತ್ರದುರ್ಗ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ತುಮಕೂರಿನಲ್ಲೂ ಇಂದಿನಿಂದ ಸೋಮವಾರದವರೆಗೆ ಮಳೆಯಾಗಲಿದೆ.
ಕರ್ನಾಟಕ ಮಾತ್ರವಲ್ಲದೆ, ಒಡಿಶಾ, ಭುವನೇಶ್ವರದಲ್ಲಿ ಒಂದು ವಾರದಿಂದ ಭಾರೀ ಮಳೆಯಾಗುತ್ತಿದೆ. ಭುವನೇಶ್ವರದ ಅನೇಕ ಕಡೆ ರಸ್ತೆಗಳು ಬಂದ್ ಆಗಿದ್ದು, ನದಿ ತೀರದ ಗ್ರಾಮಗಳಿಗೂ ನೀರು ನುಗ್ಗಿದೆ. ಇಷ್ಟೇ ಅಲ್ಲದೆ, ರಾಜಸ್ಥಾನ, ಉತ್ತರ ಪ್ರದೇಶ, ಹರಿಯಾಣ, ಚಂಡೀಗಢ, ದೆಹಲಿ, ಪಂಜಾಬ್ ರಾಜ್ಯಗಳಲ್ಲೂ ಇಂದು ಮಳೆಯಾಗಲಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಸಚಿವ ಸ್ಥಾನ ಸಿಗುತ್ತಿದ್ದಂತೆ ಹಳೆಯ ಟ್ವೀಟ್ಗಳನ್ನು ಡಿಲೀಟ್ ಮಾಡಿದ ಶೋಭಾ ಕರಂದ್ಲಾಜೆ