ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರಿನ ಅಬ್ಬರ ಕಡಿಮೆಯಾಗಿದ್ದು, ಗುರುವಾರದಿಂದ ರಾಜ್ಯಕ್ಕೆ ಹಿಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂಗಾರು ಚುರುಕುಗೊಂಡಿದ್ದರಿಂದ ರಾಜ್ಯದಲ್ಲಿ ಒಂದು ವಾರದಿಂದ ಎಡ ಬಿಡದೇ ಮಳೆ ಸುರಿದಿತ್ತು. ಸದ್ಯ ಮುಂದಿನ ಎರಡು ದಿನಗಳವರೆಗೆ ರಾಜ್ಯದಲ್ಲಿ ಮಳೆಯಾಗುವ ಸಂಭವ ಕಡಿಮೆ ಇದೆ.
ಅ.21ರಿಂದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಭಾಗಗಳಲ್ಲಿ ಮತ್ತೆ ಮಳೆ ಪ್ರಮಾಣ ಹೆಚ್ಚಲಿದೆ. ಹಿಂಗಾರು ಮಳೆ ಪ್ರವೇಶದ ಲಕ್ಷಣಗಳು ಕಂಡು ಬಂದಿವೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಯೆಲ್ಲೋ ಅಲರ್ಟ್ : ಉತ್ತರಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಗುಡುಗು ಸಿಡಿಲು ಸಹಿತ ಮಳೆ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.