ಬೆಂಗಳೂರು : ನಗರದ ಪ್ರತಿಷ್ಠಿತ ಮಂತ್ರಿ ಮಾಲ್ಗೆ ಮತ್ತೆ ಬೀಗ ಬಿದ್ದಿದೆ. ಬಿಬಿಎಂಪಿಗೆ ಸುಮಾರು 27 ಕೋಟಿ ತೆರಿಗೆ ಪಾವತಿಸದ ಹಿನ್ನೆಲೆ ಬೀಗ ಹಾಕಲಾಗಿದೆ.
3 ವರ್ಷದಿಂದ ಮಂತ್ರಿ ಮಾಲ್ ಬಿಬಿಎಂಪಿಗೆ ಒಟ್ಟು 27 ಕೋಟಿ ತೆರಿಗೆಯನ್ನು ಪಾವತಿಸಿಲ್ಲ. ಪದೇಪದೆ ನೋಟಿಸ್ ಜಾರಿ ಮಾಡಿದರೂ ತೆರಿಗೆ ಪಾವತಿಸಿಲ್ಲ. ಹೀಗಾಗಿ ಇಂದು (ಡಿಸೆಂಬರ್ 6) ಮತ್ತೆ ಬಿಬಿಎಂಪಿ ಪಶ್ಚಿಮ ವಲಯದ ಅಧಿಕಾರಿಗಳು ಮಾಲ್ಗೆ ಬೀಗ ಜಡಿದಿದ್ದಾರೆ.
ಮಂತ್ರಿ ಮಾಲ್ಗೆ ಬಿಬಿಎಂಪಿ ಅಧಿಕಾರಿಗಳು ಬೀಗ ಹಾಕುತ್ತಿರುವುದು ಇದು ಮೊದಲೇನಲ್ಲ. ಮೂರ್ನಾಲ್ಕು ಬಾರಿ ಬೀಗ ಹಾಕಿದ್ದಾರೆ. ಈ ವೇಳೆ ಮಾಲ್ ಮಾಲೀಕರು ಸಮಯವನ್ನು ಕೇಳಿದ್ದರು. ತೆರಿಗೆ ಪಾವತಿಸದ ಹಿನ್ನೆಲೆ ಈ ಹಿಂದೆ ಅಂದರೆ ನವೆಂಬರ್ 15ಕ್ಕೆ ಅಧಿಕಾರಿಗಳು ಮಾಲ್ಗೆ ಬೀಗ ಹಾಕಿದ್ದರು.
ಹಿಂದೆ ಬೀಗ ಹಾಕಿದ್ದಾಗ 5 ಕೋಟಿ ತೆರಿಗೆ ಪಾವತಿಸಿದ್ದ ಮಾಲ್ ಮಾಲೀಕರು, ಬಳಿಕ ಬಾಕಿ ತೆರಿಗೆ ಪಾವತಿಗೆ ಸಮಯ ಕೇಳಿದ್ದರು. ಆಡಳಿತ ಮಂಡಳಿಗೆ ಕೊಟ್ಟ ಸಮಯಾವಕಾಶ ಮುಕ್ತಾಯಗೊಂಡಿದ್ದರಿಂದ ಬೀಗ ಹಾಕಲಾಗಿತ್ತು.