Publish Date: Wed, 04 Sep 2019 (19:37 IST)
Updated Date: Wed, 04 Sep 2019 (19:39 IST)
ಮಾಜಿ ಸಚಿವ ಡಿಕೆ ಶಿವಕುಮಾರ್ ಬಂಧನ ಖಂಡಿಸಿ ನಡೆದ ಪ್ರತಿಭಟನೆ ಕೆಲವರನ್ನು ಸಂಕಷ್ಟಕ್ಕೆ ದೂಡಿದೆ.
ಚಿತ್ರದುರ್ಗದ ಒನಕೆ ಓಬವ್ವವೃತ್ತದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮೀತ್ ಷಾ ಹಾಗೂ ಸಿಎಂ ಬಿ ಎಸ್ ಯಡಿಯೂರಪ್ಪ ವಿರುದ್ಧ ಪ್ರತಿಭಟನಾಕಾರರು ಧಿಕ್ಕಾರದ ಘೋಷಣೆ ಕೂಗಿದ್ರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಫಾತ್ಯರಾಜನ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಡಿಕೆ ಶಿವಕುಮಾರ್ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡಿದ್ರು.
ಇನ್ನು, ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ವೇಳೆ ಅವಘಡ ನಡೆದಿದೆ. ಚಳ್ಳಕೆರೆ ಪಟ್ಟಣದ ನೆಹರೂ ವೃತ್ತದಲ್ಲಿ ನಡೆದ ಘಟನೆ ಇದಾಗಿದ್ದು, ಟೈಯರ್ ಬೆಂಕಿ ಹಚ್ಚು ವೇಳೆ ಅಗ್ನಿ ಅವಘಡ ಸಂಭವಿಸಿದೆ.
9 ಮಂದಿಗೆ ಬೆಂಕಿ ಸ್ಪರ್ಶವಾಗಿದ್ದರೆ, ಓರ್ವ ಮಹಿಳೆ ಸೇರಿದಂತೆ 9 ಜನರು ಬೆಂಕಿಯಿಂದಾಗಿ ಗಾಯಗೊಂಡಿದ್ದಾರೆ. ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ಗಾಯಾಳುಗಳನ್ನು ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ.