ಕ್ವಾರಂಟೈನ್ ಮಾಡಲಾಗಿದ್ದ ಮೂವರು ಓಡಿ ಹೋಗಿರುವ ಘಟನೆ ನಡೆದಿದೆ.
									
										
								
																	
ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿನ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ  ಕೊರೊನಾ ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ  ಕ್ವಾರಂಟೈನ್ ಮಾಡಲಾಗಿತ್ತು. ಆ ಜನರಲ್ಲಿ ಮೂವರು ತಪ್ಪಿಸಿಕೊಂಡು ಹೋಗಿದ್ದಾರೆ.
									
			
			 
 			
 
 			
			                     
							
							
			        							
								
																	ಕ್ವಾರಂಟೈನ್ ನಿಂದ ಓಡಿ ಹೋದವರ ವಿರುದ್ಧ ಮಸ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಸಾರ್ವಜನಿಕರು ಹೋಂ ಕ್ವಾರಂಟೈನ್  ಅಥವಾ ವಸತಿ ಶಾಲೆಯಲ್ಲಿ ಕ್ವಾರಂಟೈನ್ ನಲ್ಲಿ ಇದ್ದವರು ಯಾರಾದರೂ ತಪ್ಪಿಸಿಕೊಂಡು ಹೋದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ ಪಿ ವೇದಮೂರ್ತಿ ತಿಳಿಸಿದ್ದಾರೆ.