Publish Date: Mon, 04 Dec 2017 (13:17 IST)
Updated Date: Mon, 04 Dec 2017 (13:19 IST)
ಆಳುವ ಪಕ್ಷದ ಆಳುಗಳು ಎನ್ನುವ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ತಿರುಗೇಟು ನೀಡಿರುವ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ನಾವು ಯಾರ ಆಳುಗಳಲ್ಲ ಸಂವಿಧಾನದ ನಿರ್ದೇಶನದಂತೆ ನಡೆಯುತ್ತೇವೆ ಎಂದು ಗುಡುಗಿದ್ದಾರೆ
ಖಡಕ್ ಅಧಿಕಾರಿಗಳೆಂಬ ಸೋಗು ಬಿಟ್ಟು ಆಳುವ ಪಕ್ಷದ ಆಳುಗಳು ಅನ್ನುವುದನ್ನು ಒಪ್ಪಿಕೊಳ್ಳಿ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ಟ್ವೀಟ್ ಮಾಡುವ ಮೂಲಕ ಮೈಸೂರು ಎಸ್‌ಪಿ ರವಿ ಚನ್ನಣ್ಣವರ್‌ಗೆ ಪರೋಕ್ಷವಾಗಿ ಟಾಂಗ್ ನೀಡಿದ್ದರು.
ದತ್ತ ಜಯಂತಿಗೆ ಸಕಲ ವ್ಯವಸ್ಥೆ ಮಾಡಿರುವ ಅಣ್ಣಾಮಲೈ, ಸರ್ಕಾರವನ್ನು ಎದುರುಹಾಕಿಕೊಂಡ ಡಿಐಜಿ ರೂಪ, ಮೆಡಿಕಲ್ ಸೀಟ್ ಬ್ಲಾಕಿಂಗ್ ಹಗರಣ ತಡೆದ ಐಎಎಸ್ ರಶ್ಮಿ ನೋಡಿ ಕಲಿಯಿರಿ ಎನ್ನುವ ಹೇಳಿಕೆಗೆ ಉತ್ತರಿಸಿದ ಅವರು, ಚಿಕ್ಕಮಗಳೂರು ಎಸ್‌ಪಿ ಅಣ್ಣಾಮಲೈಯಾಗಲಿ ಅಥವಾ ಪೊಲೀಸ್ ಪೇದೆಯಿಂದಾಗಲಿ ಕಲಿಯುವುದು ತುಂಬಾ ಇದೆ. ನಾವು ಪರಿಪೂರ್ಣರಲ್ಲ. ಕಲಿಯಬೇಕಾದುದ್ದು ಯಾವಾಗಲು ಇರುತ್ತದೆ ಎಂದು ತಿಳಿಸಿದ್ದಾರೆ.
ಸಂವಿಧಾದ ನಿರ್ದೇಶನದಂತೆ ಕಾರ್ಯನಿರ್ವಹಿಸುವುದು ನಮ್ಮ ಜವಾಬ್ದಾರಿಯಾಗಿದೆ. ಯಾವ ಪಕ್ಷವೇ ಅಧಿಕಾರದಲ್ಲಿರಲಿ ನಮ್ಮ ಕರ್ತವ್ಯ ನಾವು ನಿಭಾಯಿಸುತ್ತೇವೆ ಎಂದು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಚನ್ನಣ್ಣನವರ್ ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.