Select Your Language

Notifications

webdunia
webdunia
webdunia
webdunia

ಎಸ್ ಪಿ, ಡಿಸಿ ಬಿಜೆಪಿ ಏಜೆಂಟ್ ರಂತೆ ವರ್ತಿಸುತ್ತಿದ್ದಾರೆ -ಡಿಕೆಶಿ

ಎಸ್ ಪಿ, ಡಿಸಿ ಬಿಜೆಪಿ ಏಜೆಂಟ್ ರಂತೆ ವರ್ತಿಸುತ್ತಿದ್ದಾರೆ -ಡಿಕೆಶಿ
ಕಲಬುರಗಿ , ಶುಕ್ರವಾರ, 9 ಏಪ್ರಿಲ್ 2021 (13:00 IST)
ಕಲಬುರಗಿ : ಮಸ್ಕಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಹಣ ಹಂಚಿಕೆ ಆರೋಪ  3 ಕ್ಷೇತ್ರಗಳ ಉಪಚುನಾವಣೆ ಬಗ್ಗೆ ಬಿಜೆಪಿ ದೃತಿಗೆಟ್ಟಿದೆ. ಇದನ್ನು ನೋಡಿ ಬಿಜೆಪಿಯವರು ಹಣ ಹಂಚುತ್ತಿದ್ದಾರೆ. ಅವರನ್ನು ಅನರ್ಹ ಮಾಡಿ ಬಂಧಿಸಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಗ್ರಹಿಸಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೂಡಲೆ ಚುನಾವಣಾ ಆಯೋಗ ಮಧ್ಯಪ್ರವೇಶಿಸಲಿ. ಹಣ ಹಂಚಿಕೆ ವಿಡಿಯೋಗಿಂತ ದೊಡ್ಡ ಸಾಕ್ಷಿ ಬೇಕಾಗಿಲ್ಲ. ನಮ್ಮ ಕಾರ್ಯಕರ್ತರು ಈ ಬಗ್ಗೆ ದೂರು ನೀಡುತ್ತಾರೆ ಎಂದು ಹೇಳಿದ್ದಾರೆ.

ಈ ಹಿಂದೆ ನನ್ನ ಮತವನ್ನೇ ಅನರ್ಹ ಮಾಡಿದ್ದರು. ಎಸ್ ಪಿ, ಡಿಸಿ ಬಿಜೆಪಿ ಏಜೆಂಟ್ ರಂತೆ ವರ್ತಿಸುತ್ತಿದ್ದಾರೆ. ಈ ಚುನಾವಣೆ ಮುಗಿದ ಮೇಲೆ ಏನಾಗುತ್ತೆಂದು ಗೊತ್ತಿಲ್ಲ. ಆಗ ಈ ಎಲ್ಲ ಅಧಿಕಾರಿಗಳು ತೊಂದರೆಗೆ ಸಿಲುಕಿಕೊಳ್ತಾರೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.   

Share this Story:

Follow Webdunia kannada

ಮುಂದಿನ ಸುದ್ದಿ

5 ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಯ ಬಗ್ಗೆ ಅರುಣ್ ಸಿಂಗ್ ಹೇಳಿದ್ದೇನು?