Publish Date: Mon, 22 Jul 2019 (11:50 IST)
Updated Date: Mon, 22 Jul 2019 (14:23 IST)
ಬೆಂಗಳೂರು : ಸೋಮವಾರವೇ ಮೈತ್ರಿ ಸರ್ಕಾರದ ವಿಶ್ವಾಸಮತಯಾಚನೆಯ ಪ್ರಕ್ರಿಯೆ ಮುಗಿಸುವುದಾಗಿ ಸ್ಪೀಕರ್ ರಮೇಶ್ ಕುಮಾರ್ ಬಿಜೆಪಿ ನಿಯೋಗಕ್ಕೆ ಭರವಸೆ ನೀಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ಬಿಜೆಪಿ ನಿಯೋಗ ಶಾಸಕ ಮಾಧುಸ್ವಾಮಿ ನೇತೃತ್ವದಲ್ಲಿ ಸ್ಪೀಕರ್ ರಮೇಶ್ ಅವರನ್ನು ಭೇಟಿ ಮಾಡಿ ವಿಶ್ವಾಸಮತಯಾಚನೆಗೆ ಸಮಯ ನಿಗದಿ ಮಾಡಿ, ಇಂದು ಯಾವುದೇ ಕಾರಣಕ್ಕೂ ವಿಶ್ವಾಸಮತ ಯಾಚನೆ ಮುಂದೂಡದಂತೆ ಮನವಿ ಮಾಡಿಕೊಂಡಿದ್ದರು.
ಬಿಜೆಪಿ ನಿಯೋಗದ ಮನವಿಗೆ ಸ್ಪಂದಿಸಿದ ಸ್ಪೀಕರ್, ವಿಶ್ವಾಸ ಮತ ಯಾಚನೆಗೆ ವಿಳಂಬ ಮಾಡಲು ಸಾಧ್ಯವಿಲ್ಲ. ಇಂದೇ ವಿಶ್ವಾಸಮತ ಯಾಚನೆ ಮುಗಿಸುವುದಾಗಿ ತಿಳಿಸಿದ್ದಾರೆ.