ಅಧಿಕಾರಿಗಳ ಬೇಜವಾಬ್ದಾರಿಯಿಂದ ನಗರದಲ್ಲಿ ಇತ್ತೀಚೆಗೆ ಸುರಿದ ಬಾರಿ ಮಳೆಯಿಂದ ಅನೇಕ ಮನೆಗಳು ಜಲಾವೃತಗೊಂಡವು. ಇದರಿಂದ ಜನಸಾಮಾನ್ಯರಿಗೆ ತೊಂದರೆಯಾಗಿದ್ದು, ಇದಕ್ಕೆ ನಾನು ಕ್ಷಮೆಯಾಚಿಸುತ್ತೇನೆ. ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳುತ್ತೇನೆ ಎಂದು ಸಭಾಧ್ಯಕ್ಷ ಕೆ.ಬಿ.ಕೋಳಿವಾಡ್ ತಿಳಿಸಿದ್ದಾರೆ.
ಸಭಾಪತಿ ಕೆ.ಬಿ.ಕೋಳಿವಾಡ್ ಅಧ್ಯಕ್ಷತೆಯ ಕೆರೆ ಒತ್ತುವರಿ ಪರಿಶೀಲನಾ ಸಮಿತಿ, ಇಂದು ಬೆಂಗಳೂರು ನಗರದ ಮಡಿವಾಳ ಹಾಗೂ ಕೋಡಿಚಿಕ್ಕನಹಳ್ಳಿ ಕೆರೆ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಈ ವೇಳೆ ಸಾರ್ವಜನಿಕರು ಅನೇಕ ದೂರುಗಳನ್ನು ಸಭಾಪತಿಯವರಿಗೆ ನೀಡಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೆಂಗಳೂರಿನಲ್ಲಿ ಮಳೆ ಪರಿಹಾರ ಕಾಮಗಾರಿಗೆಗಾಗಿ ತಕ್ಷಣ 140 ಕೋಟಿ ರೂಪಾಯಿ ಹಣವನ್ನು ಬಿಡುಗಡೆ ಮಾಡಿರುವುದು ಸ್ವಾಗತಾರ್ಹ ಎಂದು ತಿಳಿಸಿದರು.
ಕೆರೆಯಿಂದ ನೀರು ಹರಿದು ಹೋಗಲು ನಡೆಸುವ ಕಾಮಕಾರಿಗಳಿಗೆ ಅರಣ್ಯ ಇಲಾಖೆಯಿಂದ ಯಾವುದೇ ಅಡ್ಡಿಯಾಗಬಾರದು ಎಂದು ಆದೇಶ ನೀಡಲಾಗುವುದು. ಮಡಿವಾಳ ಕೆರೆ ನೀರು ಸರಾಗವಾಗಿ ಹರಿದು ಹೋಗುವಂತೆ ಕಾಮಗಾರಿ ನಡೆಸಬೇಕು. ಎಲ್ಲೆಲ್ಲಿ ರಾಜಕಾಲುವೆಗಳ ಒತ್ತುವರೆಯಾಗಿದೆಯೋ ಅವುಗಳನ್ನು ತಕ್ಷಣ ತೆರವುಗೊಳಿಸಲು ಆದೇಶ ನೀಡುತ್ತೇನೆ ಎಂದು ಸಭಾಧ್ಯಕ್ಷ ಕೆ.ಬಿ.ಕೋಳಿವಾಡ್ ಭರವಸೆ ನೀಡಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.