Select Your Language

Notifications

webdunia
webdunia
webdunia
webdunia

18 ಬಿಜೆಪಿ ಶಾಸಕರ ಅಮಾನತು ವಾಪಾಸ್ ಪಡೆಯುವ ಮುನ್ಸೂಚನೆ ಕೊಟ್ಟ ಸ್ಪೀಕರ್ ಯುಟಿ ಖಾದರ್‌

ಸ್ಪೀಕರ್ ಯು.ಟಿ.ಖಾದರ್

Sampriya

ಬೆಂಗಳೂರು , ಭಾನುವಾರ, 25 ಮೇ 2025 (16:48 IST)
Photo Credit X
ಬೆಂಗಳೂರು: ಸ್ಪೀಕರ್ ಪೀಠಕ್ಕೆ ಅಗೌರವ ತೋರಿದ ಹಿನ್ನೆಲೆ ಅಮಾನತುಗೊಂಡ 18ಬಿಜೆಪಿ ಶಾಸಕರ ಅಮಾನತು ಹಿಂಪಡೆಯುವ ಬಗ್ಗೆ ಸ್ಪೀಕರ್ ಯುಟಿ ಖಾದರ್ ಅವರು ಚಿಂತಿಸಿದ್ದಾರೆ.

ಕಳೆದ ವಿಧಾನಸಭಾ ಅಧಿವೇಶನದಲ್ಲಿ ಸ್ಪೀಕರ್ ಪೀಠಕ್ಕೆ ಗೌರವವನ್ನು ಕೊಡದೇ ಸ್ಪೀಕರ್ ಪೀಠಕ್ಕೆ ಬಂದು ಮುತ್ತಿಗೆ ಹಾಕಿ ಪೇಪರ್‌ಗಳನ್ನು ಹರಿದು ತೂರಾಡಿದಕ್ಕೆ 18ಬಿಜೆಪಿ ಶಾಸಕರನ್ನು 6 ತಿಂಗಳು ಅಮಾನತು ಮಾಡಲಾಯಿತು.

ಇದಿಘ ಈವಿಚಾರವಾಗಿ ಇಂದು ಸ್ಪೀಕರ್ ಯುಟಿ ಖಾದರ್ ಅವರು ಸಭೆ ಕರೆದಿದ್ದಾರೆ. ಅದರಲ್ಲಿ ಮಹತ್ವದ ನಿರ್ಧಾರ ಹೊರಹೊಮ್ಮಲಿದೆ.

ಈ ಸಂಬಂಧ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಅವರು, ನಾವು ಸಹಾನುಭೂತಿಯಿಂದ ಇದ್ದೇವೆ. ಸ್ಪೀಕರ್ ಅವರು ಸಭೆಗೆ ನಮ್ಮನ್ನೆಲ್ಲಾ ಕರೆದಿದ್ದಾರೆ. ಮೀಟಿಂಗ್‌ನಲ್ಲಿ ಏನ್ ಚರ್ಚೆ ಆಗುತ್ತೋ ಗೊತ್ತಿಲ್ಲ. ಅವರು ಏನ್ ಪ್ರಸ್ತಾವನೆ ಇಟ್ಟಿದ್ದಾರೋ ನೋಡಬೇಕು. ವಿಪಕ್ಷ ನಾಯಕರೆಲ್ಲಾ ಹೋಗಿ ಸ್ಪೀಕರ್ ಭೇಟಿ ಮಾಡಿದ್ದಾರೆ. ನಾವು ಕೂಡ ಸಹಾನುಭೂತಿಯಿಂದ ಇದ್ದೀವಿ. ಅಮಾನತು ವಿಚಾರದಲ್ಲಿ ಸರ್ಕಾರ ಭಾಗಿ ಆಗಿಲ್ಲ. ಸ್ಪೀಕರ್ ಏನ್ ತೀರ್ಮಾನ ತೆಗೆದುಕೊಳ್ತಾರೋ ನೋಡೋಣ ಎಂದರು.

ಈ ಬಗ್ಗೆ ಮಾತನಾಡಿದ ಸ್ಪೀಕರ್ ಯು.ಟಿ. ಖಾದರ್ ಅವರು, ಅಧಿವೇಶನ ನಡೆಯುವ ಸಂಧರ್ಭದಲ್ಲಿ ಸಂವಿಧಾನ ಪೀಠಕ್ಕೆ ಅಗೌರವ ತೋರಿಸಿದ್ದರು. ಅದರ ಬಗ್ಗೆ ಕ್ರಮ‌ ತೆಗೆದುಕೊಂಡಿದ್ದೆವು. ಈ ಮಧ್ಯದಲ್ಲಿ ವಿಪಕ್ಷ ನಾಯಕರು, ನಾಯರ ಬೇಡಿಕೆ ಇತ್ತು. ಚರ್ಚೆ ಸಂಧರ್ಭದಲ್ಲಿ ಘಟನೆ ನಡೆದಿದೆ ಎಂದಿದ್ದರು. ಅಮಾನತ್ತು ಹಿಂಪಡೆಯುವ ಬಗ್ಗೆ ನಿರ್ಧಾರ ಮಾಡಿದ್ದೇವೆ‌. ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ಆಗಬೇಕು ಚರ್ಚೆ ಬಳಿಕ ನಿರ್ಧಾರ ಆಗಲಿದೆ. ಸಿಎಂ, ವಿಪಕ್ಷ ನಾಯಕ ಎಲ್ಲರೂ ಸಭೆಯಲ್ಲಿ ಇರುತ್ತಾರೆ. ಅಂದು ಆದ ಘಟನೆಯನ್ನ ವಿಧಾನಸಭೆಯಲ್ಲಿ ಚರ್ಚೆ ಮಾಡಿ, ತೀರ್ಮಾನ ಮಾಡಲಾಯಿತು. ಬಹುಮತ ಇರೋ ಶಾಸಕರ ನಿರ್ಣಯದ ಮೇಲೆ ತೆಗೆದುಕೊಂಡ ಕ್ರಮ‌ ಅದು. ಅಮಾನತು ಆದೇಶದ 6 ತಿಂಗಳ ಪೈಕಿ ಈಗಾಗಲೇ ಎರಡು ತಿಂಗಳು ಮುಗಿದು ಹೋಗಿದೆ. ಶಾಸಕ ಮಿತ್ರರು ನಮ್ಮವರೇ, ಸಕಾರಾತ್ಮಕ ನಿರ್ಧಾರ ತೆಗೆದುಕೊಳ್ಳುತ್ತೇವೆ. ಇಲ್ಲಿ ಬಿಜೆಪಿ, ಕಾಂಗ್ರೆಸ್ ಅಂತಲ್ಲ. ಸ್ಪೀಕರ್ ಪೀಠಕ್ಕೆ ಅಗೌರವ ತೋರಿಸಿದ ಯಾರಾದರೂ ಕ್ರಮ ಆಗಲಿದೆ ಎಂದು ತಿಳಿಸಿದರು.



ಸ್ಪೀಕರ್ ಪೀಠಕ್ಕೆ ಅಗೌರವ ತೋರಿದ ಹಿನ್ನೆಲೆ ಮಾ.21ರಂದು ಅಮಾನತುಗೊಂಡ ಶಾಸಕರನ್ನು ಅಧಿವೇಶನ ಕೊಠಡಿಯಿಂದ ಮಾರ್ಷಲ್‌ಗಳು ಬಲವಂತವಾಗಿ ಎತ್ತಿಕೊಂಡು ಹೋಗಿ ಹೊರಗೆ ಹಾಕಿದ್ದರು.

ಇದೀಗ ಶಾಸಕರು ರಾಜ್ಯಪಾಲರು ಹಾಗೂ ಕೋರ್ಟ್ ಮೆಟ್ಟಿಲೇರಿದ ಬೆನ್ನಲ್ಲಿಯೇ ಇದೀ ರಾಜ್ಯ ಸರ್ಕಾರದಿಂದ ಪುನಃ ಶಾಸಕರ ಅಮಾನತು ಹಿಂಪಡೆಯುವ ವಿಚಾರದ ಬಗ್ಗೆ ಸ್ಪೀಕರ್ ಯು.ಟಿ. ಖಾದರ್ ಅವರು ಇಂದು ಸಂಜೆ ಮಹತ್ವದ ಸಭೆಯನ್ನು ಕರೆದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಆಪರೇಷನ್ ಸಿಂಧೂರ್‌ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಭಾರತದ ಪ್ರತಿಬಿಂಬ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ