Select Your Language

Notifications

webdunia
webdunia
webdunia
webdunia

ಶೀರೂರು ಶ್ರೀಗಳ ನೋವಿನ ಬಗ್ಗೆಯೂ ಚರ್ಚೆ ಮಾಡ್ತೇನೆ- ಸಚಿವ ಪ್ರಮೋದ್ ಮಧ್ವರಾಜ್

ಶೀರೂರು ಶ್ರೀಗಳ ನೋವಿನ ಬಗ್ಗೆಯೂ ಚರ್ಚೆ ಮಾಡ್ತೇನೆ- ಸಚಿವ ಪ್ರಮೋದ್ ಮಧ್ವರಾಜ್
ಉಡುಪಿ , ಭಾನುವಾರ, 11 ಮಾರ್ಚ್ 2018 (13:14 IST)
ಉಡುಪಿ : ಉಡುಪಿ ಜಿಲ್ಲೆಯ ಶ್ರೀಕೃಷ್ಣಮಠದ ಶೀರೂರು ಶ್ರೀ ಅವರು ಉಡುಪಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಅವರು ಫೋನ್ ಮುಖಾಂತರ  ಶ್ರೀಗಳ ಜೊತೆ ಮಾತುಕತೆ ನಡೆಸಿದ್ದು, ಇದೀಗ ಸಚಿವ ಪ್ರಮೋದ್ ಮಧ್ವರಾಜ್ ಅವರು ಕೂಡ ಭೇಟಿ ಮಾಡುವುದಾಗಿ ತಿಳಿಸಿದ್ದಾರೆ.


ಈ ಬಗ್ಗೆ ಮಾತನಾಡಿದ ಸಚಿವ ಪ್ರಮೋದ್ ಮಧ್ವರಾಜ್ ಅವರು,’ ಶೀರೂರು ಶ್ರೀಗಳ ಹೇಳಿಕೆ ಮಾಧ್ಯಮಗಳಲ್ಲಿ ನೋಡಿದ್ದೇನೆ. ಸ್ವಾಮೀಜಿ ನನ್ನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು ತಿಳಿದಿದ್ದೇನೆ. ಅವರ ಅಸಮಾಧಾನದ ಬಗ್ಗೆ ಶೀರೂರು ಶ್ರೀಗಳ ಜೊತೆ ಚರ್ಚೆ ಮಾಡುತ್ತೇನೆ. ನನಗೆ ಶೀರೂರು ಶ್ರೀಗಳ ಬಗ್ಗೆ ಅಪಾರವಾದ ಗೌರವವಿದೆ. ಈಗ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಹೇಳಿಕೆ ಕೊಟ್ಟಿದ್ದಾರೆ, ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ. ಅವರಿಗೆ ಆಗಿರುವ ನೋವಿನ ಬಗ್ಗೆಯೂ ಚರ್ಚೆ ಮಾಡ್ತೇನೆ’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ
 

Share this Story:

Follow Webdunia kannada

ಮುಂದಿನ ಸುದ್ದಿ

ನಾಡಧ್ವಜದ ಬಣ್ಣಗಳ ಅರ್ಥದ ಕುರಿತು ಸಿಎಂ ಸಿದ್ದರಾಮಯ್ಯ ಅವರು ಮಾಡಿರುವ ಟ್ವೀಟ್ ಗೆ ಸಂಸದ ಪ್ರತಾಪ್ ಸಿಂಹ ಕೊಟ್ಟ ಉತ್ತರ ಏನು ಗೊತ್ತಾ...?