Select Your Language

Notifications

webdunia
webdunia
webdunia
webdunia

ಜಲಪಾತಗಳ ವೀಕ್ಷಣೆಗಾಗಿ ವಿಶೇಷ ಬಸ್ ವ್ಯವಸ್ಥೆ

ಜಲಪಾತಗಳ ವೀಕ್ಷಣೆಗಾಗಿ ವಿಶೇಷ ಬಸ್ ವ್ಯವಸ್ಥೆ
ಹುಬ್ಬಳ್ಳಿ , ಬುಧವಾರ, 2 ಆಗಸ್ಟ್ 2023 (13:22 IST)
ಹುಬ್ಬಳ್ಳಿ : ಇತ್ತೀಚೆಗೆ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಪಾತಗಳ ವೀಕ್ಷಣೆಗಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಾರಾಂತ್ಯ ಹಾಗೂ ಸಾರ್ವಜನಿಕ ರಜೆ ದಿನಗಳಂದು ಹುಬ್ಬಳ್ಳಿ, ಧಾರವಾಡ ಹಾಗೂ ಬೆಳಗಾವಿಯಿಂದ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ.
 
ಉತ್ತರ ಕರ್ನಾಟಕ ಭಾಗದ ಬಹುತೇಕ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಹಲವಾರು ಜಲಪಾತಗಳು ಮೈದುಂಬಿ ಕೊಂಡಿವೆ.ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಬೇಡಿಕೆಯ ಮೇರೆಗೆ ವಾರಾಂತ್ಯ ಹಾಗೂ ರಜೆ ದಿನಗಳಂದು ಹುಬ್ಬಳ್ಳಿಯಿಂದ ಜೋಗ ಫಾಲ್ಸ್, ಧಾರವಾಡ ದಿಂದ ಗೋಕಾಕ್ ಫಾಲ್ಸ್ ಮತ್ತು ದಾಂಡೇಲಿಗೆ ಹಾಗೂ ಬೆಳಗಾವಿಯಿಂದ ಅಂಬೋಲಿ ಫಾಲ್ಸ್ ಮತ್ತು ಗೋಕಾಕ್ ಫಾಲ್ಸ್ಗೆ ವಿಶೇಷ ಬಸ್ಗಳ ವ್ಯವಸ್ಥೆ ಮಾಡಲಾಗಿದೆ.

ಪ್ರತಿ ರವಿವಾರ, 2ನೇ ಮತ್ತು 4ನೇ ಶನಿವಾರ ಹಾಗೂ ಸಾರ್ವಜನಿಕ ರಜಾ ದಿನಗಳಂದು ಈ ಬಸ್ಗಳ ಸೇವೆ ಲಭ್ಯವಿದೆ. ಒಂದೇ ದಿನದಲ್ಲಿ ಎರಡರಿಂದ ನಾಲ್ಕು ಸ್ಥಳಗಳ ವೀಕ್ಷಣೆಗೆ ಅನುಕೂಲವಾಗುವಂತೆ ವೇಳಾಪಟ್ಟಿ ರೂಪಿಸಲಾಗಿದೆ. ಮಿತವ್ಯಯಕರ ಪ್ರಯಾಣದರ ನಿಗದಿಪಡಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಶಕ್ತಿ ಯೋಜನೆ ಹಣ ಬಿಡುಗಡೆ ಮಾಡಿದ ಸರ್ಕಾರ