ನಿಗಮಗಳಿಗೆ ವಿಶೇಷ ಅನುದಾನ ನೀಡಲು ಆಗಲ್ಲ

Webdunia
ಶನಿವಾರ, 17 ಜೂನ್ 2023 (18:48 IST)
ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವಿ.ಎಸ್‌ ಪುಷ್ಪಾ ಅವರು KSRTC, BMTC ಸೇರಿದಂತೆ 4 ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದಿದ್ದು ಸಾರಿಗೆ ಸಂಸ್ಥೆಗಳಿಗೆ ಉಂಟಾಗುವ ಆರ್ಥಿಕ ಹೊರೆ ಸರಿದೂಗಿಸಲು ಹೆಚ್ಚುವರಿ ವಿಶೇಷ ಅನುದಾನ ಒದಗಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಸಾರಿಗೆ ನಿಗಮಗಳ ಸಿಬ್ಬಂದಿ ವೇತನ ಪರಿಷ್ಕರಣೆಯ ಹೆಚ್ಚುವರಿ ವೆಚ್ಚ ನಿಭಾಯಿಸಲು ಹಾಗೂ ವೇತನ ಪಾವತಿ, ಇಂಧನ ವೆಚ್ಚಕ್ಕಾಗಿ ಹೆಚ್ಚುವರಿ ಅನುದಾನ ಒದಗಿಸಲು ಸಾಧ್ಯವಿಲ್ಲ. ನಿಗಮಗಳು ಆಂತರಿಕ ಸಂಪನ್ಮೂಲಗಳಿಂದಲೇ ಇದನ್ನು ಭರಿಸುವಂತೆ ಜೂನ್‌ 7ರಂದು ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ಶಕ್ತಿ ಯೋಜನೆಗೆ ಸರ್ಕಾರದಿಂದ 4 ಸಾವಿರ ಕೋಟಿಯಷ್ಟು ವಾರ್ಷಿಕ ಹೆಚ್ಚುವರಿ ಹೊರೆ ತಗುಲಲಿದೆ. ಹೀಗಾಗಿ ನಿಗಮಗಳಿಗೆ ಹೆಚ್ಚುವರಿ ವಿಶೇಷ ಅನುದಾನ ಒದಗಿಸಲು ಅವಕಾಶ ಇಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ಕುರಿತು ಟ್ವೀಟ್‌ ಮೂಲಕ ಟೀಕಿಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ಶಕ್ತಿ ಯೋಜನೆಯಿಂದಾಗಿ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಹಾಗೂ ಇತರೆ ಸಾರಿಗೆ ಸಂಸ್ಥೆಗಳಿಗೆ ಉಂಟಾಗುವ ಆರ್ಥಿಕ ಹೊರೆಯನ್ನು ಸರಿದೂಗಿಸಲು ಹೆಚ್ಚುವರಿ ಅನುದಾನ ನೀಡಲಾಗುವುದಿಲ್ಲವೆಂದು ಆರ್ಥಿಕ ಇಲಾಖೆ ಸಾರಿಗೆ ಸಂಸ್ಥೆಗಳ ಪ್ರಸ್ತಾವನೆಯನ್ನು ತಿರಸ್ಕರಿಸಿದೆ. ಸಿದ್ದರಾಮಯ್ಯನವರೇ ಸಾರಿಗೆ ಸಂಸ್ಥೆಗಳ ನೌಕರರ ಸಂಬಳ ಹಾಗೂ ನಿಗಮಗಳ ಅಭಿವೃದ್ಧಿಯ ಕಥೆ ಏನು? ಎಂದು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಗಿಯದ ಇಂಡಿಗೋ ವಿಮಾನದ ರಗಳೆ: ಹುಬ್ಬಳ್ಳಿಯಲ್ಲಿ ವಧು ವರರಿಲ್ಲದೇ ನಡೆದ ನಡೆದ ಆರತಕ್ಷತೆ

ಕುರ್ಚಿ ಕದನದ ಬೆನ್ನಲ್ಲೇ ಸಚಿವರಿಗೆ ಖಡಕ್ ಸೂಚನೆ ಕೊಟ್ಟ ಸಿಎಂ ಸಿದ್ದರಾಮಯ್ಯ

ವ್ಲಾಡಿಮಿರ್ ಪುಟಿನ್ ಗೆ ವಿಶೇಷ ಗಿಫ್ಟ್ ಕೊಟ್ಟ ಪ್ರಧಾನಿ ಮೋದಿ: ಇದರಲ್ಲೇ ಇರೋದು ಸ್ಪೆಷಾಲಿಟಿ

ಭಾರತಕ್ಕೆ ಬಂದ ವ್ಲಾಡಿಮಿರ್ ಪುಟಿನ್ ಎಲ್ಲೂ ಮಾಡದ ಕೆಲಸವನ್ನು ಇಲ್ಲಿ ಮಾಡಿದ್ರು

ಮುಂದಿನ ಸುದ್ದಿ
Show comments