Publish Date: Thu, 28 May 2026 (20:36 IST)
Updated Date: Thu, 28 May 2026 (20:39 IST)
ಬೆಂಗಳೂರು: ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳುತ್ತಿದ್ದ ಸಿದ್ದರಾಮಯ್ಯ ಕೂದಲೆಳೆಯಲ್ಲಿ ಅಪಾಯದಿಂದ ಪಾರಾಗಿದ್ದಾರೆ.
ಇಂದು ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟಿದ್ದರು. ಇದಾದ ಬಳಿಕ ಅವರು ಸಂಜೆ ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣದಿಂದ ದೆಹಲಿಗೆ ವಿಶೇಷ ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದಾರೆ. ಆದರೆ ದಾರಿಯಲ್ಲಿ ಹವಾಮಾನ ವೈಪರೀತ್ಯ ಸಮಸ್ಯೆ ಎದುರಾಗಿದೆ.
ಹೀಗಾಗಿ ಜೈಪುರದಲ್ಲಿಯೇ ಅವರಿದ್ದ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. ಸಿದ್ದರಾಮಯ್ಯ ಜೊತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ, ಸಚಿವ ಭೈರತಿ ಸುರೇಶ್ ಮೊದಲಾದವರಿದ್ದರು. ವಿಮಾನ ತುರ್ತು ಭೂಸ್ಪರ್ಶವಾದ ಕಾರಣ ಆತಂಕ ಸೃಷ್ಟಿಯಾಗಿತ್ತು.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ