Publish Date: Sat, 03 Dec 2022 (13:38 IST)
Updated Date: Sat, 03 Dec 2022 (14:40 IST)
ಬೆಳಗಾವಿ : ಕನ್ನಡಿಗರ ಅಭಿವೃದ್ಧಿ ಮತ್ತು ರಕ್ಷಣೆ ಸರ್ಕಾರದ ಜವಾಬ್ದಾರಿಯಾಗಿದೆ. ಅದಕ್ಕಾಗಿ ರಾಜ್ಯದ ಗಡಿಭಾಗದಲ್ಲಿರುವ ಜಿಲ್ಲೆಗಳ 1,800 ಗ್ರಾಮ ಪಂಚಾಯತಿ ಅಭಿವೃದ್ಧಿಪಡಿಸುವ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಲಸಂಪನ್ಮೂಲ ಇಲಾಖೆ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ,
ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ರಾಮದುರ್ಗ ತಾಲೂಕಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂದಾಜು 671.28 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.