Select Your Language

Notifications

webdunia
webdunia
webdunia
webdunia

ರೈತರ ಸಮಸ್ಯೆ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನ: ಟಿ.ಬಿ.ಜಯಚಂದ್ರ

ರೈತರ ಸಮಸ್ಯೆ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನ: ಟಿ.ಬಿ.ಜಯಚಂದ್ರ
ಬೆಂಗಳೂರು , ಬುಧವಾರ, 7 ಅಕ್ಟೋಬರ್ 2015 (15:26 IST)
ರಾಜ್ಯದಲ್ಲಿ ಭೀಕರ ಬರಗಾಲವಿರುವ ಹಿನ್ನೆಲೆಯಲ್ಲಿ 10 ದಿನಗಳ ಕಾಲ ವಿಶೇಷ ಅಧಿವೇಶನ ಕರೆಯಲು ಇಂದು ನಡೆದ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂಬುದಾಗಿ ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರು ತಿಳಿಸಿದ್ದಾರೆ.  
 
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಹಿಂದೆ ವಿಶೇಷ ಅಧಿವೇಶನ ಕರೆಯಬೇಕೆಂಬುದು ವಿರೋಧ ಪಕ್ಷಗಳ ನಿಲುವೂ ಆಗಿತ್ತು. ಅಲ್ಲದೆ ರಾಜ್ಯದಲ್ಲಿ ಪ್ರಸ್ತುತ ಭೀಕರ ಬರಗಾಲವೂ ಇದೆ. ಈ ಹಿನ್ನೆಲೆಯಲ್ಲಿ ವಿಶೇಷ ಅಧಿವೇಶನ ಕರೆಯಲು ನಿರ್ಧರಿಸಲಾಗಿದ್ದು, ಅಧಿವೇಶನದಲ್ಲಿ ರೈತರ ಸಮಸ್ಯೆಗಳ ಬಗ್ಗೆಯೇ ವಿಶೇಷ ಒತ್ತು ಕೊಟ್ಟು ಚರ್ಚಿಸಲಾಗುತ್ತದೆ ಎಂದ ಅವರು, ಅಧಿವೇಶನಕ್ಕೆ ದಿನಾಂಕ ನಿಗದಿಗೊಳಿಸುವುದು ಸಿಎಂ ಸಿದ್ದರಾಮಯ್ಯ ಅವರ ವಿವೇಚನೆಗೆ ಬಿಟ್ಟ ವಿಚಾರ ಎಂದರು. 
 
ಇನ್ನು ಈ ಹಿಂದೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ರಾಜ್ಯದಲ್ಲಿ ಬರಗಾಲವಿದೆ. ಪರಿಣಾಮ ಸಾಲ ತೀರಿಸಲಾಗದೆ ರೈತರು ಆತ್ಮಹತ್ಯೆ ಮಾಡಿತಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ವಿಶೇಷ ಅಧಿವೇಶನ ಕರೆಯಲಿ ಎಂದು ಸರ್ಕಾರವನ್ನು ಆಗ್ರಹಿಸಿದ್ದರು.

Share this Story:

Follow Webdunia kannada