Webdunia - Bharat's app for daily news and videos

Install App

ಕೆ ಆರ್ ಪುರ -ವೈಟ್ ಫೀಲ್ಡ್ ಮಾರ್ಗದಲ್ಲಿ ಮೆಟ್ರೋ ರೈಲಿನ ವೇಗದ ಪರೀಕ್ಷೆ

Webdunia
ಸೋಮವಾರ, 6 ಫೆಬ್ರವರಿ 2023 (17:17 IST)
ಬಿಎಂಆರ್ಸಿಎಲ್ ಬೆಂಗಳೂರು ನಗರದ ಬಹುನಿರೀಕ್ಷಿತ ಕೆ. ಆರ್. ಪುರ-ವೈಟ್ಫೀಲ್ಡ್ ಮಾರ್ಗದಲ್ಲಿ ನಮ್ಮ ಮೆಟ್ರೋ ರೈಲಿನ ವೇಗದ ಪರೀಕ್ಷೆಯನ್ನು ಭಾನುವಾರ ಆರಂಭಿಸಿದ್ದು . ಈ ಮಾರ್ಗ ಮಾರ್ಚ್ ಅಂತ್ಯಕ್ಕೆ ವಾಣಿಜ್ಯ ಸಂಚಾರಕ್ಕೆ ಮುಕ್ತವಾಗುವ ನಿರೀಕ್ಷೆ ಇದೆ. ಕೆ. ಆರ್. ಪುರ-ವೈಟ್ಫೀಲ್ಡ್ ಮಾರ್ಗದಲ್ಲಿ ಇದೇ ಮೊದಲ ಬಾರಿಗೆ ವೇಗದ ಪರೀಕ್ಷೆ ಮಾಡಲಾಗಿದ್ದು. ಗಂಟೆಗೆ 80 ಕಿ. ಮೀ. ವೇಗದಲ್ಲಿ ರೈಲನ್ನು ಓಡಿಸಿ ಪ್ರಾಯೋಗಿಕ ಸಂಚಾರ ನಡೆಸಲಾಗಿದೆ. ನಮ್ಮ ಮೆಟ್ರೋ ನೇರಳೆ ಮಾರ್ಗದ ವಿಸ್ತರಿತ ಮಾರ್ಗ ಇದಾಗಿದ್ದು, 13 ಕಿ. ಮೀ. ಉದ್ದವಿದೆ. ರೈಲ್ವೆ ಸುರಕ್ಷತಾ ಆಯುಕ್ತರು ಪರಿಶೀಲನೆ ಮಾಡಿ ಒಪ್ಪಿಗೆ ನೀಡಿದ ಬಳಿಕ ಈ ಮಾರ್ಗ ವಾಣಿಜ್ಯ ಸಂಚಾರಕ್ಕೆ ಮುಕ್ತವಾಗಲಿದೆ. ಒಟ್ಟು 13 ಕಿ. ಮೀ. ಮಾರ್ಗವನ್ನು ರೈಲು 12 ನಿಮಿಷದಲ್ಲಿ ಕ್ರಮಿಸಿದೆ. ಯಾವುದೇ ನಿಲ್ದಾಣದಲ್ಲಿ ರೈಲನ್ನು ನಿಲ್ಲಿಸಲಾಗಿಲ್ಲ. ಗರಿಷ್ಠ ವೇಗದ ಮಿತಿಯಲ್ಲಿ ರೈಲನ್ನು ಓಡಿಸಿ ಪ್ರಾಯೋಗಿಕ ಪರೀಕ್ಷೆ ನಡೆಸಲಾಗಿದೆ.ಎಂದು ಬಿಎಂಆರ್ ಸಿ ಎಲ್ ನ ಅಧಿಕಾರಿಗಳು ತಿಳಿಸಿದ್ದಾರೆ .

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments