ಮೈಸೂರು : ಸಿದ್ದರಾಮಯ್ಯ ಅವರು ದೇವೇಗೌಡರನ್ನು ಸೋಲಿಸಲು ಪ್ಲ್ಯಾನ್ ಮಾಡಿದ್ದಾರೆ ಎಂದು ಬಿಜೆಪಿ ನಾಯಕ ಶ್ರೀರಾಮುಲು ಹೊಸ ಬಾಂಬ್ ಸಿಡಿಸಿದ್ದಾರೆ.
									
			
			 
 			
 
 			
					
			        							
								
																	
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲನುಭವಿಸಿದ್ದ ಸಿದ್ದರಾಮಯ್ಯ ಅವರು ದೇವೇಗೌಡರನ್ನು ಸೋಲಿಸಲು ಪ್ಲ್ಯಾನ್ ಮಾಡಿದ್ದಾರೆ. ಈ ಮೂಲಕ ಹಾವಿನ ದ್ವೇಷದಂತೆ ಸೇಡು ತೀರಿಸಿಕೊಳ್ಳಲು ಮುಂದಾಗಿದ್ದಾರೆ ಎಂದು ಹೇಳಿದ್ದಾರೆ.
									
										
								
																	
ಇನ್ನು ಸಚಿವ ಜಿ.ಟಿ.ದೇವೇಗೌಡ ಅವರು ಮೈತ್ರಿ ಅಭ್ಯರ್ಥಿ ಸೋತರೆ ನಾವು ಜವಾಬ್ದಾರರಲ್ಲ ಎಂದಿದ್ದಾರೆ. ಜಿ.ಟಿ.ದೇವೇಗೌಡ ಹೇಳಿಕೆಯಿಂದ ಎರಡೂ ಪಕ್ಷಗಳ ನಾಯಕರ ನಡುವೆ ಸಮನ್ವಯತೆ ಇಲ್ಲ ಎಂಬುದು ಗೊತ್ತಾಗುತ್ತದೆ. ಚುನಾವಣೆ ಮುಗಿದ ಬೆನ್ನಲ್ಲೇ ರಾಜ್ಯ ಸರ್ಕಾರ ಪತನವಾಗಲಿದೆ ಎಂದು ಶ್ರೀರಾಮುಲು ತಿಳಿಸಿದ್ದಾರೆ.
									
											
							                     
							
							
			        							
								
																	
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ 
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.