Select Your Language

Notifications

webdunia
webdunia
webdunia
webdunia

ಶ್ರೀನಿವಾಸ ಗೌಡ, ಗುಬ್ಬಿ ಶ್ರೀನಿವಾಸ್ ಜೆಡಿಎಸ್‌ ನಿಂದ ಉಚ್ಛಾಟನೆ

ಶ್ರೀನಿವಾಸ ಗೌಡ, ಗುಬ್ಬಿ ಶ್ರೀನಿವಾಸ್ ಜೆಡಿಎಸ್‌ ನಿಂದ ಉಚ್ಛಾಟನೆ
bangalore , ಬುಧವಾರ, 22 ಜೂನ್ 2022 (19:57 IST)
ರಾಜ್ಯಸಭೆಯಲ್ಲಿ ಪಕ್ಷದ ವಿಪ್ ಅಡ್ಡಿ ಮತದಾನ ಮಾಡಿದ ಕೋಲಾರ ಶಾಸಕ ಕೆ.ಶ್ರೀನಿವಾಸ ಗೌಡ ಹಾಗೂ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಅವರು ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಆಯ್ಕೆಯಾಗಿದ್ದಾರೆ.
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಬುಧವಾರ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಮಿತಿ ಅಧ್ಯಕ್ಷ ಬಂಡೆಪ್ಪ ಖಾಷೆಂಪೂರ್ ಮಾಧ್ಯಮಗಳಿಗೆ ಪ್ರಕಟಣೆ ತಿಳಿಸಿದೆ.
ಪಕ್ಷಾಂತರ ನಿಷೇಧ ಕಾಯ್ದೆ ಅಡಿ ಶಾಸಕರ ವಿಧಾನಸಭೆ ಸದಸ್ಯತ್ವದಿಂದ ಅನರ್ಹಗೊಳಿಸಲು ತಕ್ಷಣವೇ ವಿಧಾನಸಭಾಧ್ಯಕ್ಷರಿಗೆ ದೂರು ನೀಡಲು ಕೂಡ ಸಭೆ ನಡೆಸಲಾಯಿತು. ನಾಳೆ ಅಥವಾ ನಾಡವರಿಗೆ ಸ್ಪೀಕರ್ ದೂರು ನೀಡುತ್ತಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಸಭೆಯಲ್ಲಿ ಮಾಜಿ ಪ್ರಧಾನಿಗಳು, ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡ, ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಹೆಚ್.ಡಿ.ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ, ಜಪ್ರುಲ್ಲಾ ಖಾನ್, ಎಂ.ಕೃಷ್ಣಾರೆಡ್ಡಿ, ರಾಜಾ ವೆಂಕಟಪ್ಪ ನಾಯಕ, ಕೆ.ಎಂ.ತಿಮ್ಮರಾಯಪ್ಪ, ಟಿ. .ಎ.ಶರವಣ, ಶಾರದಾ ಪೂರ್ಯನಾಯಕ್, ರೂತ್ ಮನೋರಮಾ, ವಿ.ನಾರಾಯಣಸ್ವಾಮಿ, ಸಮೃದ್ಧಿ ಮಂಜುನಾಥ್, ವಿಲ್ಸನ್ ರೆಡ್ಡಿ, ಸುಧಾಕರ ಲಾಲ್, ಹೆಚ್.ಎಂ.ರಮೇಶ್ ಗೌಡ, ಆರ್.ಪ್ರಕಾಶ್, ಸಯ್ಯದ್ ಶಫಿ ಉಲ್ಲಾ, ನಾಸಿರ್ ಉಸ್ತಾದ್ ಹಾಗೂ ಕೋರ್ ಕಮಿಟಿ ಸಂಚಾಲಕರಾದ ಕೆ.ಎನ್.ತಿಪ್ಪೇಸ್ವಾಮಿ ಅವರು ಭಾಗವಹಿಸಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಡಿಎಲ್‌ ಎಫ್‌ ನಿಂದ 34,615 ಕೋಟಿ ವಂಚನೆ: ಬ್ಯಾಂಕಿಂಗ್‌ ಇತಿಹಾಸದಲ್ಲೇ ಅತೀ ದೊಡ್ಡ ಪ್ರಕರಣ!