Publish Date: Sun, 04 Jul 2021 (20:05 IST)
Updated Date: Sun, 04 Jul 2021 (20:07 IST)
ಮೈಸೂರಿನ ತಮ್ಮ ನಿವಾಸಕ್ಕೆ ಸಚಿವ ಸಿ.ಪಿ. ಯೋಗೇಶ್ವರ್ ಭೇಟಿ ನೀಡಿದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಹಿರಿಯ ರಾಜಕಾರಣಿ ಎಂಬ ಗೌರವದಿಂದ ನನ್ನನ್ನು ಭೇಟಿ ಮಾಡಲು ಬಂದಿದ್ದರೆ ಹೊರತು ಯಾವುದೇ ರಾಜಕೀಯ ಚರ್ಚೆಗಳು ಆಗಿಲ್ಲ. ಅವರಿಗೆ ಬಿಜೆಪಿ ಪಕ್ಷದಲ್ಲಿ ಉಸಿರುಗಟ್ಟುವ ವಾತಾವರಣ ಇದೆ ಎಂಬುದು ನನಗೆ ಗೊತ್ತಿಲ್ಲ ಎಂದು ಅವರು ಹೇಳಿದರು.
ಪ್ರಸ್ತುತ ಬಿಜೆಪಿಯಲ್ಲಿ ನಾಯಕತ್ವದ ಬದಲಾವಣೆ ವಿಚಾರ ಮುಗಿದ ಅಧ್ಯಾಯ. ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ ನೀಡಿ ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಹೈಕಮಾಂಡ್ ತಿಳಿಸಿದ್ದಾರೆ. ಹೈಕಮಾಂಡ್ ಮುಂದೆ ಯಾವ ತೀರ್ಮಾನ ತೆಗೆದುಕೊಳ್ಳುವುದೋ ನೋಡಬೇಕು. ಯಡಿಯೂರಪ್ಪ ಕೂಡ ಹೈಕಮಾಂಡ್ ನಿರ್ಧಾರಕ್ಕೆ ಬದ್ದನಿದ್ದೇನೆ ಎಂರಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದರು.
ಬಿಜೆಪಿಗೆ ನಾವು ಹೊಸಬರು, ಪಕ್ಷ ಕಟ್ಟುವುದರಲ್ಲಿ ಯಡಿಯೂರಪ್ಪನವರ ಅಪಾರ ಶ್ರಮವಿದೆ. ನಾವು ಬಿಜೆಪಿಗೆ ಬಂದಿದ್ದರಿಂದ ಪಕ್ಷಕ್ಕೆ ಸಾಕಷ್ಟು ಶಕ್ತಿ ಬಂದಿದೆ. ನೆಲೆಯೇ ಇಲ್ಲದ ಕ್ಷೇತ್ರಗಳಲ್ಲಿ ಬಿಜೆಪಿ ಶಕ್ತಿ ವೃದ್ಧಿಯಾಗಿದೆ. ಚಾಮರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್ 3 ಲಕ್ಷ ಅಂತರದಿಂದ ಗೆಲ್ಲುವ ಸಾಮರ್ಥ್ಯವಿತ್ತು. ಆದರೆ ಈಗ ಪರಿಸ್ಥಿತಿ ಬದಲಾಗಿದೆ ಎಂದು ಶ್ರೀನಿವಾಸ್ ಪ್ರಸಾದ್ ಪರೋಕ್ಷವಾಗಿ ವಲಸಿಗರ ಪರ ಬ್ಯಾಟ್ ಬೀಸಿದರು.
ರಮೇಶ್ ಜಾರಕಿಹೊಳಿ ಪ್ರಕರಣ ಎಸ್.ಐ.ಟಿ ಮುಂದೆ ತನಿಖೆ ನಡೆಯುತ್ತಿದೆ. ತನಿಖಾ ವರದಿ ನಂತರ ಅವರಿಗೆ ಮಂತ್ರಿ ಸ್ಥಾನ ಸಿಗಬಹುದು ಎಂದು ಅವರು ಅಭಿಪ್ರಾಯಪಟ್ಟರು.