ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸಂಪುಟದಿಂದ ಕೈ ಬಿಟ್ಟಿದ್ದಾರೆ ಎಂದು ಅಸಮಾಧಾನಗೊಂಡು ಕಾಂಗ್ರೆಸ್ ಸದಸ್ಯತ್ವ ಸ್ಥಾನಕ್ಕೇ ರಾಜೀನಾಮೆ ನೀಡಿ ಹೊರಬಂದ ಶ್ರೀನಿವಾಸ ಪ್ರಸಾದ್ ಬಿಜೆಪಿ ಸೇರುವುದು ಬಹುತೇಕ ಖಚಿತವಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಸ್ವತಃ ಯಡಿಯೂರಪ್ಪರೇ ಅವರನ್ನು ಪಕ್ಷಕ್ಕೆ ಆಗಮಿಸುವಂತೆ ದೂರವಾಣಿ ಮೂಲಕ ಕೇಳಿಕೊಂಡಿದ್ದರು. ಸಂಬಂಧಿಸಿ ಮಾತುಕತೆಯೂ ವೇಗವಾಗಿ ನಡೆದಿತ್ತು. ಅವೆಲ್ಲವೂ ಫಲಪ್ರದವಾಗಿದ್ದು, ಶ್ರೀನಿವಾಸ ಪ್ರಸಾದ್ ಇದೇ ನವೆಂಬರ್ ನವೆಂಬರ್ 7 ಅಥವಾ 10 ರಂದು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಅದಕ್ಕೂ ಮುನ್ನಾ ಶ್ರೀನಿವಾಸ ಪ್ರಸಾದ್ ನಂಜನಗೂಡಿನಲ್ಲಿ ಬೃಹತ್ ಸಮಾವೇಶ ನಡೆಸಿ ತಮ್ಮ ಶಕ್ತಿ ಸಾಮರ್ಥ್ಯ ಏನೆಂಬುದನ್ನು ತೋರಿಸಲು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ.
ಇನ್ನೂ ಹೆಚ್ಚಿನ ಮಾತುಕತೆ ಕುರಿತು ಶ್ರೀನಿವಾಸ ಪ್ರಸಾದ್ ನಾಳೆ ಭಾನುವಾರ ಯಡಿಯೂರಪ್ಪರನ್ನು ಭೇಟಿ ಮಾಡುವ ಸಾಧ್ಯತೆಯಿದೆ. ಆ ವೇಳೆ ಪಕ್ಷ ಸೇರ್ಪಡೆಯಾಗುವ ಅಂತಿಮ ನಿರ್ಧಾರ ಪ್ರಕಟವಾಗಲಿದೆ ಎನ್ನಲಾಗುತ್ತಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ