Select Your Language

Notifications

webdunia
webdunia
webdunia
webdunia

ಅಖಂಡ ಶ್ರೀನಿವಾಸಮೂರ್ತಿ ಬಿಜೆಪಿಗೆ ಸೇರ್ಪಡೆ ಪಕ್ಷಕ್ಕೆ ದೊಡ್ಡ ಶಕ್ತಿ ನೀಡಿದೆ: ಯಡಿಯೂರಪ್ಪ

LokhSabha Election 2024

Sampriya

ಬೆಂಗಳೂರು , ಬುಧವಾರ, 17 ಏಪ್ರಿಲ್ 2024 (15:28 IST)
Photo Courtesy X
ಬೆಂಗಳೂರು: ಬಿಜೆಪಿ ಸಂಸದ ಸಂಗಣ್ಣ ಕರಡಿ ಅವರು ಕಾಂಗ್ರೆಸ್ ಸೇರಿದ ಬೆನ್ನಲ್ಲೇ ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರು ಮಾಜಿ ಸಿಎಂ ಯಡಿಯೂರಪ್ಪ ಉಪಸ್ಥಿತಿಯಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು. ಈ ಮೂಲಕ ಎರಡೂ ಪಕ್ಷಕ್ಕೂ ಹೊಸಬ್ಬರ ಸೇರ್ಪಡೆಯಾಗಿದೆ.

ಯಡಿಯೂರಪ್ಪ ಅವರ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಬಿಜೆಪಿಗೆ ಸೇರಿದರು.

ಯಡಿಯೂರಪ್ಪ ಮಾತನಾಡಿ, ಶ್ರೀನಿವಾಸಮೂರ್ತಿ ಅವರ ಸೇರ್ಪಡೆ ಪಕ್ಷಕ್ಕೆ ದೊಡ್ಡ ಶಕ್ತಿ ನೀಡಿದೆ. ಇನ್ನು ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಾಟೆ ವೇಳೆ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಯನ್ನು ಸುಡಲಾಗಿತ್ತು. ಈ ವೇಳೆ ಅವರಿಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ.  ನಾವು ಮಾತ್ರ ಶ್ರೀನಿವಾಸ ಮೂರ್ತಿಯವರ ಜತೆ ಗಟ್ಟಿಯಾಗಿ ನಿಂತೆವು ಎಂದರು.

ಈ ಸಂದರ್ಭದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್‍ಕುಮಾರ್, ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್, ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಮಂಜುಳಾ ಇದ್ದರು.



Share this Story:

Follow Webdunia kannada

ಮುಂದಿನ ಸುದ್ದಿ

ಗ್ಯಾರಂಟಿಗಳನ್ನು ಮುಟ್ಟೋದು ಬಿಜೆಪಿ- ದಳದ ಹಣೆಯಲ್ಲಿ ಬರೆದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು