Webdunia - Bharat's app for daily news and videos

Install App

ಶ್ರೀನಿವಾಸ್ ಪ್ರಸಾದ್ ರಾಜೀನಾಮೆಯಿಂದ ಪಕ್ಷಕ್ಕೆ ಹಾನಿಯಿಲ್ಲ: ರಾಯರೆಡ್ಡಿ

Webdunia
ಶನಿವಾರ, 15 ಅಕ್ಟೋಬರ್ 2016 (16:24 IST)
ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅಧಿಕಾರಕ್ಕಾಗಿ ಪಕ್ಷದ ವಿರುದ್ಧ ಮಾತನಾಡಿದ್ದಾರೆ. ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟರೆ ತಪ್ಪಿಲ್ಲ. ಅವರ ರಾಜೀನಾಮೆಯಿಂದ ಕಾಂಗ್ರೆಸ್‌ ಪಕ್ಷಕ್ಕೆ ಯಾವುದೇ ಹಾನಿಯಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ ಖಾರವಾಗಿ ಹೇಳಿದರು. 
 
ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅಧಿಕಾರಕ್ಕಾಗಿ ಪಕ್ಷದ ವಿರುದ್ಧ ಮಾತನಾಡಿದ್ದಾರೆ. ಸಚಿವ ಸ್ಥಾನಕ್ಕಾಗಿ ನಾವು 3 ವರ್ಷ ಕಾದಿದ್ದೇವೆ. ಸಚಿವರಾಗಲು ನಮಗೆ ಅರ್ಹತೆ ಇಲ್ಲವೇ ಎಂದು ಪ್ರಶ್ನಿಸಿದರು.
 
ಶ್ರೀನಿವಾಸ್ ಪ್ರಸಾದ್ ಅವರ ಆರೋಗ್ಯ ಸರಿ ಇಲ್ಲದಿದ್ದರೂ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಲಾಗಿತ್ತು. ಮೂರು ವರ್ಷ ಮಂತ್ರಿಯಾಗಲು ಅವಕಾಶ ನೀಡಿದ್ದಕ್ಕಾಗಿ ಸಿಎಂ ಸಿದ್ದರಾಮಯ್ಯನವರಿಗೆ ಕೃತಜ್ಞರಾಗಿರಬೇಕಿತ್ತು ಎಂದು ಹೇಳಿದರು. 
 
ತಮ್ಮ ಸ್ವಾರ್ಥಕ್ಕಾಗಿ ಪಕ್ಷದ ವಿರುದ್ಧ ಮಾತನಾಡುವುದು ಸರಿಯಲ್ಲ. ಮಂತ್ರಿಯಾಗುವುದು ಜನ್ಮಸಿದ್ಧ ಹಕ್ಕಲ್ಲ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ ಎಂದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments