ದೇಶದಲ್ಲಿ ಬಾಬು ಜಗಜೀವನ್‌ರಾಂ ಅವರನ್ನು ಬಿಟ್ಟರೆ ದಲಿತ ನಾಯಕರ ಪೈಕಿ ಅತಿ ಹೆಚ್ಚು ಅಧಿಕಾರ ಅನುಭವಿಸಿದ್ದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ. ಆದರೂ ಅವರಿಗೆ ತೃಪ್ತಿ ಇಲ್ಲ ಎಂದು ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಕಿಡಿಕಾರಿದರು.
ಬಿಜೆಪಿ ಸೇರ್ಪಡೆಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಲ್ಲಿಕಾರ್ಜುನ್ ಖರ್ಗೆ ತಮ್ಮ ಪುತ್ರನನ್ನು ಮಂತ್ರಿಯನ್ನಾಗಿಸುವ ಸಲುವಾಗಿ ಹಿಂದೆನದೆಲ್ಲವನ್ನೂ ಮರೆತು ನನ್ನ ಮರೆತು ನನ್ನ ಪರವಾಗಿ ಒಂದು ಮಾತನ್ನೂ ಆಡಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಚಾಮುಂಡೇಶ್ವರಿ ಕ್ಷೇತ್ರದ ಉಪಚುನಾವಣೆ ವೇಳೆ ಇಂದಿನ ಸಿಎಂ ಸಿದ್ದರಾಮಯ್ಯ ಮೊದಲ ಬಾರಿಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಾಗ ಪರಿಸ್ಥಿತಿ ತೀರಾ ಗಂಭೀರವಾಗಿತ್ತು. ಆಗ, ಖರ್ಗೆ, ಪರಮೇಶ್ವರ್, ಕಾಗೋಡು ತಿಮ್ಮಪ್ಪ ಅವರೊಂದಿಗೆ ಸೇರಿ ಸಿದ್ದರಾಮಯ್ಯ ನನ್ನ ಮನೆ ಬಾಗಿಲಿಗೆ ಬಂದು ನೆರವು ಕೋರಿದ್ದರು ಎಂದು ಹೇಳಿದರು.
ನನ್ನನ್ನು ಸಂಪುಟದಿಂದ ಕೈಬಿಟ್ಟ ನಂತರ ಯಾರೊಬ್ಬ ನಾಯಕರು ನನ್ನ ಪರವಾಗಿ ಮಾತನಾಡಲಿಲ್ಲ. ಎಲ್ಲವನ್ನು ಮರೆತುಬಿಟ್ಟರು ಎಂದು ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ವಾಗ್ದಾಳಿ ನಡೆಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ