ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿರುವ ಸಚಿವ ಎಚ್.ಸಿ.ಮಹಾದೇವಪ್ಪ ಬಾಡೂಟ ನೀಡಿರುವುದು ನೋಡಿದಲ್ಲಿ ಕಾಂಗ್ರೆಸ್ ಪಕ್ಷ ದಿವಾಳಿಯಾಗಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ ಎಂದು ಮಾಜಿ ಸಚಿವ ಹಿರಿಯ ಮುಖಂಡ ಶ್ರೀನಿವಾಸ್ ಪ್ರಸಾದ್ ಗುಡುಗಿದ್ದಾರೆ.
ಮೈಸೂರು ಜಿಲ್ಲೆಯ ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮತದಾರರಿಗೆ ಆಮಿಷವೊಡ್ಡಲು ಸಚಿವ ಮಹಾದೇವ ಪ್ರಸಾದ್ ಬಾಡೂಟ ನೀಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಂಜನಗೂಡು ಕ್ಷೇತ್ರದಿಂದ ಸಚಿವ ಹೆಚ್.ಸಿ.ಮಹದೇವಪ್ಪ ಪುತ್ರ ಸುನೀಲ್ ಭೋಸ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗುವ ಸಾಧ್ಯತೆಗಳ ಹಿನ್ನೆಲೆಯಲ್ಲಿ, ಮತದಾರರನ್ನು ಸೆಳೆಯಲು ಕಾಂಗ್ರೆಸ್ ಈಗಾಗಲೇ ರಣತಂತ್ರ ರೂಪಿಸಿದೆ.
ಪುತ್ರ ಸುನೀಲ್ ಭೋಸ್‌ನನ್ನು ಚುನಾವಣೆಯಲ್ಲಿ ಗೆಲ್ಲಿಸಲು ಕಾಂಗ್ರೆಸ್ ಕಾರ್ಯಕರ್ತರಿಗೆ ಮತ್ತು ಮತದಾರರಿಗೆ ಬಾಡೂಟ ಮತ್ತು ಹಣ ನೀಡಿ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಶತಮಾನದ ಇತಿಹಾಸವಿರುವ ಕಾಂಗ್ರೆಸ್ ಪಕ್ಷ ಇಂತಹ ಹೀನಾಯ ಕೃತ್ಯಗಳಿಗೆ ಕೈ ಹಾಕಬಾರದು. ಸಾಧನೆಗಳನ್ನು ತೋರಿಸಿ ಮತದಾರರಿಗೆ ಮತಗಳನ್ನು ಪಡೆಯಿರಿ. ವಾಮಮಾರ್ಗದಿಂದ ಮತಗಳನ್ನು ಸೆಳೆಯುವಂತಹ ಕೀಳು ರಾಜಕೀಯಕ್ಕೆ ಮೊರೆ ಹೋಗಬೇಡಿ ಎಂದು ಶ್ರೀನಿವಾಸ್ ಪ್ರಸಾದ್ ಸಲಹೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ