ಸಚಿವ ಮಹಾದೇವಪ್ಪ ಬಾಡೂಟಕ್ಕೆ ಶ್ರೀನಿವಾಸ್ ಪ್ರಸಾದ್ ಗರಂ

Webdunia
ಬುಧವಾರ, 2 ನವೆಂಬರ್ 2016 (20:51 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿರುವ ಸಚಿವ ಎಚ್.ಸಿ.ಮಹಾದೇವಪ್ಪ ಬಾಡೂಟ ನೀಡಿರುವುದು ನೋಡಿದಲ್ಲಿ ಕಾಂಗ್ರೆಸ್ ಪಕ್ಷ ದಿವಾಳಿಯಾಗಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ ಎಂದು ಮಾಜಿ ಸಚಿವ ಹಿರಿಯ ಮುಖಂಡ ಶ್ರೀನಿವಾಸ್ ಪ್ರಸಾದ್ ಗುಡುಗಿದ್ದಾರೆ. 
 
ಮೈಸೂರು ಜಿಲ್ಲೆಯ ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮತದಾರರಿಗೆ ಆಮಿಷವೊಡ್ಡಲು ಸಚಿವ ಮಹಾದೇವ ಪ್ರಸಾದ್ ಬಾಡೂಟ ನೀಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 
 
ನಂಜನಗೂಡು ಕ್ಷೇತ್ರದಿಂದ ಸಚಿವ ಹೆಚ್.ಸಿ.ಮಹದೇವಪ್ಪ ಪುತ್ರ ಸುನೀಲ್ ಭೋಸ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗುವ ಸಾಧ್ಯತೆಗಳ ಹಿನ್ನೆಲೆಯಲ್ಲಿ, ಮತದಾರರನ್ನು ಸೆಳೆಯಲು ಕಾಂಗ್ರೆಸ್ ಈಗಾಗಲೇ ರಣತಂತ್ರ ರೂಪಿಸಿದೆ. 
 
ಪುತ್ರ ಸುನೀಲ್ ಭೋಸ್‌ನನ್ನು ಚುನಾವಣೆಯಲ್ಲಿ ಗೆಲ್ಲಿಸಲು ಕಾಂಗ್ರೆಸ್ ಕಾರ್ಯಕರ್ತರಿಗೆ ಮತ್ತು ಮತದಾರರಿಗೆ ಬಾಡೂಟ ಮತ್ತು ಹಣ ನೀಡಿ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
 
ಶತಮಾನದ ಇತಿಹಾಸವಿರುವ ಕಾಂಗ್ರೆಸ್ ಪಕ್ಷ ಇಂತಹ ಹೀನಾಯ ಕೃತ್ಯಗಳಿಗೆ ಕೈ ಹಾಕಬಾರದು. ಸಾಧನೆಗಳನ್ನು ತೋರಿಸಿ ಮತದಾರರಿಗೆ ಮತಗಳನ್ನು ಪಡೆಯಿರಿ. ವಾಮಮಾರ್ಗದಿಂದ ಮತಗಳನ್ನು ಸೆಳೆಯುವಂತಹ ಕೀಳು ರಾಜಕೀಯಕ್ಕೆ ಮೊರೆ ಹೋಗಬೇಡಿ ಎಂದು ಶ್ರೀನಿವಾಸ್ ಪ್ರಸಾದ್ ಸಲಹೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments