Select Your Language

Notifications

webdunia
webdunia
webdunia
webdunia

ಆಪ್ತ ಸ್ನೇಹಿತ ಜನಾರ್ದನ ರೆಡ್ಡಿ ಮುನಿಸಿಕೊಂಡ ಶ್ರೀರಾಮುಲು, ಹೇಳಿದ್ದೇನು

EX Minister SriRamulu, EX Minister Janardana Reddy, Karnataka BJP President Post Fight,

Sampriya

ಬೆಂಗಳೂರು , ಬುಧವಾರ, 22 ಜನವರಿ 2025 (18:29 IST)
Photo Courtesy X
ಬೆಂಗಳೂರು: ಒಂದು ಕಾಲದಲ್ಲಿ ಆಪ್ತ ಸ್ನೇಹಿತರಾಗಿದ್ದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮತ್ತು ಮಾಜಿ ಸಚಿವ ಬಿ ಶ್ರೀರಾಮುಲು ಅವರು, ನನ್ನನ್ನು ರಾಜಕೀಯವಾಗಿ ಮುಗಿಸಲು ಜನಾರ್ದನ ರೆಡ್ಡಿ ಯತ್ನಿಸುತ್ತಿದ್ದಾರೆ ಎಂದು ಬುಧವಾರ ಗಂಭೀರ ಆರೋಪ ಮಾಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷರ ಚುನಾವಣೆಗೆ ಕೌಂಟ್‌ಡೌನ್ ಶುರುವಾಗಿದೆ. ಹೀಗಾಗಿ ರಾಜ್ಯಕ್ಕೆ ಬಂದಿರುವ ಕರ್ನಾಟಕ ಉಸ್ತುವಾರಿ ರಾಧಾ ಮೋಹನ್ ದಾಸ್ ಅವರು ನಿನ್ನೆ ಸಂಜೆ ಕೋರ್ ಕಮಿಟಿ ಸಭೆ ನಡೆಸಿದರು.

ಕೋರ್ ಕಮಿಟಿ ಸಭೆಯಲ್ಲಿ ಸರಿಯಾಗಿ ಕೆಲಸ ಮಾಡಿಲ್ಲ ಎಂದು ಶ್ರೀರಾಮುಲು ವಿರುದ್ಧವೇ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರು ಗಂಭೀರ ಆರೋಪ ಮಾಡಿದ್ದಾರೆ.

ಇದರಿಂದ ತೀವ್ರ ಅಸಮಾಧಾನಗೊಂಡ ಶ್ರೀರಾಮುಲು, ಇನ್ನೂ ಕೂಡ ಉಪಚುನಾವಣೆ ಸೋಲಿನ ಕುರಿತ ವರದಿಯನ್ನೇ ಕೊಟ್ಟಿಲ್ಲ. ಸದಾನಂದ ಗೌಡ ಸಮಿತಿ ಉಪ ಚುನಾವಣೆ ಕುರಿತ ವರದಿಯನ್ನೇ ಕೊಟ್ಟಿಲ್ಲ. ಅದಕ್ಕೂ ಮೊದಲು ನೀವು ಹೇಗೆ ಕೆಲಸ ಮಾಡಿಲ್ಲ ಎನ್ನುತ್ತಿರಿ ಎಂದು ಶ್ರೀರಾಮುಲು, ಸಭೆಯಲ್ಲೇ ಮರು ಪ್ರಶ್ನೆ ಮಾಡಿದ್ದಾರೆ.

ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ  ಶ್ರೀರಾಮುಲು, ಉಪಚುನಾವಣೆಯಲ್ಲಿ ನಾನು ಪಕ್ಷದ ಅಭ್ಯರ್ಥಿ ಪರ ಕೆಲಸ ಮಾಡಿದ್ದೇನೆ. ಕ್ಷೇತ್ರಕ್ಕೆ ಹೋಗಿ ಕೇಳಿದ್ರೆ ನನ್ನ ಕೆಲಸದ ಬಗ್ಗೆ ಎಲ್ಲರೂ ಹೇಳುತ್ತಾರೆ. ನಾನು ಕೆಲಸ ಮಾಡಿಲ್ಲ ಎಂಬರ್ಥದಲ್ಲಿ ಹೇಳಿಕೆ ನೀಡಿದ್ದಾರೆ. ರಾಧಾಮೋಹನ್ ದಾಸ್ ಆರೋಪದಿಂದ ನನಗೆ ನೋವಾಗಿದೆ ಎಂದು ಅಸಮಾಧಾನ ಹೊರಹಾಕಿದರು.

ನನ್ನ ಬಗ್ಗೆ ತಿಳಿದುಕೊಂಡು ರಾಧಾಮೋಹನ್ ದಾಸ್ ಮಾತನಾಡಬೇಕಿತ್ತು. ರಾಧಾಮೋಹನ್ ದಾಸ್ ಅವರು ಉತ್ತರಪ್ರದೇಶ ರಾಜ್ಯದವರು ಅವರಿಗೆ ಇಲ್ಲಿನ ಕೆಲವು ವಿಚಾರಗಳು ಗೊತ್ತಿರುವುದಿಲ್ಲ. ನನ್ನ ಬಗ್ಗೆ ಲಘುವಾಗಿ ಮಾತನಾಡುವುದು ಒಳ್ಳೆಯದಲ್ಲ ಎಂದು ಹೇಳಿದ್ದೇನೆ. ಸಭೆಯಲ್ಲಿ ಈ ವಿಚಾರವನ್ನು ರಾಜ್ಯಾಧ್ಯಕರಿಗೂ ತಿಳಿಸಿದ್ದೇನೆ. ನಾನು ಕೆಲಸ ಮಾಡಿಲ್ಲ ಎಂದು ಜನಾರ್ದನರೆಡ್ಡಿ ಹೇಳಿರೋದು ಸ್ಪಷ್ಟವಾಗಿದೆ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ಯಶಸ್ವಿಯಾಗಿ ನಡೆದ ಬೆಂಗಳೂರು ಕಾಮಿಕ್ ಕಾನ್‌ ನ 12ನೇ ಆವೃತ್ತಿ