ಆಪ್ತ ಸ್ನೇಹಿತ ಜನಾರ್ದನ ರೆಡ್ಡಿ ಮುನಿಸಿಕೊಂಡ ಶ್ರೀರಾಮುಲು, ಹೇಳಿದ್ದೇನು

Sampriya
ಬುಧವಾರ, 22 ಜನವರಿ 2025 (18:29 IST)
Photo Courtesy X
ಬೆಂಗಳೂರು: ಒಂದು ಕಾಲದಲ್ಲಿ ಆಪ್ತ ಸ್ನೇಹಿತರಾಗಿದ್ದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮತ್ತು ಮಾಜಿ ಸಚಿವ ಬಿ ಶ್ರೀರಾಮುಲು ಅವರು, ನನ್ನನ್ನು ರಾಜಕೀಯವಾಗಿ ಮುಗಿಸಲು ಜನಾರ್ದನ ರೆಡ್ಡಿ ಯತ್ನಿಸುತ್ತಿದ್ದಾರೆ ಎಂದು ಬುಧವಾರ ಗಂಭೀರ ಆರೋಪ ಮಾಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷರ ಚುನಾವಣೆಗೆ ಕೌಂಟ್‌ಡೌನ್ ಶುರುವಾಗಿದೆ. ಹೀಗಾಗಿ ರಾಜ್ಯಕ್ಕೆ ಬಂದಿರುವ ಕರ್ನಾಟಕ ಉಸ್ತುವಾರಿ ರಾಧಾ ಮೋಹನ್ ದಾಸ್ ಅವರು ನಿನ್ನೆ ಸಂಜೆ ಕೋರ್ ಕಮಿಟಿ ಸಭೆ ನಡೆಸಿದರು.

ಕೋರ್ ಕಮಿಟಿ ಸಭೆಯಲ್ಲಿ ಸರಿಯಾಗಿ ಕೆಲಸ ಮಾಡಿಲ್ಲ ಎಂದು ಶ್ರೀರಾಮುಲು ವಿರುದ್ಧವೇ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರು ಗಂಭೀರ ಆರೋಪ ಮಾಡಿದ್ದಾರೆ.

ಇದರಿಂದ ತೀವ್ರ ಅಸಮಾಧಾನಗೊಂಡ ಶ್ರೀರಾಮುಲು, ಇನ್ನೂ ಕೂಡ ಉಪಚುನಾವಣೆ ಸೋಲಿನ ಕುರಿತ ವರದಿಯನ್ನೇ ಕೊಟ್ಟಿಲ್ಲ. ಸದಾನಂದ ಗೌಡ ಸಮಿತಿ ಉಪ ಚುನಾವಣೆ ಕುರಿತ ವರದಿಯನ್ನೇ ಕೊಟ್ಟಿಲ್ಲ. ಅದಕ್ಕೂ ಮೊದಲು ನೀವು ಹೇಗೆ ಕೆಲಸ ಮಾಡಿಲ್ಲ ಎನ್ನುತ್ತಿರಿ ಎಂದು ಶ್ರೀರಾಮುಲು, ಸಭೆಯಲ್ಲೇ ಮರು ಪ್ರಶ್ನೆ ಮಾಡಿದ್ದಾರೆ.

ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ  ಶ್ರೀರಾಮುಲು, ಉಪಚುನಾವಣೆಯಲ್ಲಿ ನಾನು ಪಕ್ಷದ ಅಭ್ಯರ್ಥಿ ಪರ ಕೆಲಸ ಮಾಡಿದ್ದೇನೆ. ಕ್ಷೇತ್ರಕ್ಕೆ ಹೋಗಿ ಕೇಳಿದ್ರೆ ನನ್ನ ಕೆಲಸದ ಬಗ್ಗೆ ಎಲ್ಲರೂ ಹೇಳುತ್ತಾರೆ. ನಾನು ಕೆಲಸ ಮಾಡಿಲ್ಲ ಎಂಬರ್ಥದಲ್ಲಿ ಹೇಳಿಕೆ ನೀಡಿದ್ದಾರೆ. ರಾಧಾಮೋಹನ್ ದಾಸ್ ಆರೋಪದಿಂದ ನನಗೆ ನೋವಾಗಿದೆ ಎಂದು ಅಸಮಾಧಾನ ಹೊರಹಾಕಿದರು.

ನನ್ನ ಬಗ್ಗೆ ತಿಳಿದುಕೊಂಡು ರಾಧಾಮೋಹನ್ ದಾಸ್ ಮಾತನಾಡಬೇಕಿತ್ತು. ರಾಧಾಮೋಹನ್ ದಾಸ್ ಅವರು ಉತ್ತರಪ್ರದೇಶ ರಾಜ್ಯದವರು ಅವರಿಗೆ ಇಲ್ಲಿನ ಕೆಲವು ವಿಚಾರಗಳು ಗೊತ್ತಿರುವುದಿಲ್ಲ. ನನ್ನ ಬಗ್ಗೆ ಲಘುವಾಗಿ ಮಾತನಾಡುವುದು ಒಳ್ಳೆಯದಲ್ಲ ಎಂದು ಹೇಳಿದ್ದೇನೆ. ಸಭೆಯಲ್ಲಿ ಈ ವಿಚಾರವನ್ನು ರಾಜ್ಯಾಧ್ಯಕರಿಗೂ ತಿಳಿಸಿದ್ದೇನೆ. ನಾನು ಕೆಲಸ ಮಾಡಿಲ್ಲ ಎಂದು ಜನಾರ್ದನರೆಡ್ಡಿ ಹೇಳಿರೋದು ಸ್ಪಷ್ಟವಾಗಿದೆ ಎಂದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರೇಕ್ ಫಾಸ್ಟ್ ಮುಗಿಸಿ ಮಹತ್ವದ ಹೇಳಿಕೆ ಬಿಡುಗಡೆ ಮಾಡಿದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಹಳಸಿದ ಸಂಬಂಧಕ್ಕೆ ತೇಪೆ ಹಾಕಲು ಬ್ರೇಕ್ ಫಾಸ್ಟ್ ಮೀಟಿಂಗ್: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಯೋಜನೆ ತಂದ್ರೂ ಎಲ್ರೂ ಮೋದಿ ಮೋದಿ ಅಂತಾರೆ: ಸಿದ್ದರಾಮಯ್ಯ ಬೇಸರ

ಮುಂದಿನ ಸುದ್ದಿ
Show comments