Select Your Language

Notifications

webdunia
webdunia
webdunia
webdunia

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ

Karnataka Second PUC Exam Time Table, Karnataka SSLC Time Table, Karnataka School Examination and Assessment Board

Sampriya

ಬೆಂಗಳೂರು , ಸೋಮವಾರ, 2 ಡಿಸೆಂಬರ್ 2024 (19:15 IST)
Photo Courtesy X
ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದ್ದು ಅದರಂತೆ ಮಾರ್ಚ್‌ 20ರಿಂದ ಪರೀಕ್ಷೆಗಳು ಆರಂಭಗೊಳ್ಳಲಿದೆ. ಇನ್ನೂ ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ 1ರಿಂದ ಮಾರ್ಚ್ 19ರವರೆಗೆ ನಡೆಯಲಿದೆ.

ಅಧಕೃತ ವೆಬ್‌ಸೈಟ್‌ನಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಇನ್ನೂ ವೇಳಾಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಕೂಡ ಅವಕಾಶ ನೀಡಿದ್ದು, ಡಿಸೆಂಬರ್ 2 ರಿಂದ ಡಿಸೆಂಬರ್ 16 ರವರೆಗೆ ಆಕ್ಷೇಪಣೆ ಸಲ್ಲಿಸಬಹುದಾಗಿದೆ.

ಆಕ್ಷೇಪಣೆಯನ್ನು ಪರೀಕ್ಷಾ ಮಂಡಳಿಯ ಇಮೇಲ್ ವಿಳಾಸ: [email protected] ಕ್ಕೆ ಕಳುಹಿಸಬಹುದು. ಸಂಪೂರ್ಣ ವೇಳಾಪಟ್ಟಿಯನ್ನು https://kseab.karnataka.gov.in/ ವೆಬ್‌ಸೈಟ್‌ನಲ್ಲಿ ನೋಡಬಹುದು.

Share this Story:

Follow Webdunia kannada

ಮುಂದಿನ ಸುದ್ದಿ

ಭಾರೀ ಮಳೆಯ ಮುನ್ಸೂಚನೆ: ಈ ಜಿಲ್ಲೆಯ ಶಾಲೆಗಳಿಗೆ ನಾಳೆ ರಜೆ ಘೋಷಣೆ