Select Your Language

Notifications

webdunia
webdunia
webdunia
webdunia

ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ : ನಿಷೇಧಾಜ್ಞೆ

ಎಸ್ ಎಸ್ ಎಲ್ ಸಿ  ವಾರ್ಷಿಕ ಪರೀಕ್ಷೆ : ನಿಷೇಧಾಜ್ಞೆ
ಕಲಬುರಗಿ , ಸೋಮವಾರ, 22 ಜೂನ್ 2020 (21:04 IST)
ಜೂನ್ 25 ರಿಂದ ಜುಲೈ 03 ರವರೆಗೆ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಗಳು ಜರುಗಲಿದ್ದು, ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಕಲಬುರಗಿ ಜಿಲ್ಲೆಯ ಒಟ್ಟು 136 ಪರೀಕ್ಷಾ ಕೇಂದ್ರಗಳಲ್ಲಿ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಗಳು ಜರುಗಲಿವೆ. 

ಕಲಬುರಗಿ ಜಿಲ್ಲೆಯಲ್ಲಿನ ಎಲ್ಲ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶದಲ್ಲಿ ನಿಯೋಜಿತ ಅಧಿಕಾರಿ, ಸಿಬ್ಬಂದಿಗಳು ಹಾಗೂ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಹೊರತುಪಡಿಸಿ ಇತರೆ ವ್ಯಕ್ತಿಗಳ ಪ್ರವೇಶವನ್ನು ನಿಷೇಧಿಸಲಾಗಿದೆ.

ಈ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶರತ್ ಬಿ.  ಅವರು 1973ರ ಸಿಆರ್.ಪಿ.ಸಿ. ಕಲಂ 144ರ ಅನ್ವಯ  ಈ ಆದೇಶ ಹೊರಡಿಸಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಹೋಂ ಕ್ವಾರಂಟೈನ್ ಉಲ್ಲಂಘಿಸಿದರೆ ಸಾಂಸ್ಥಿಕ ಕ್ವಾರಂಟೈನ್‍ ಗೆ ಶಿಫ್ಟ್