Select Your Language

Notifications

webdunia
webdunia
webdunia
webdunia

ಜು. 19, 22ರಂದು ಎಸ್ಸೆಸ್ಸಲ್ಸಿ ಪರೀಕ್ಷೆ

ಜು. 19, 22ರಂದು ಎಸ್ಸೆಸ್ಸಲ್ಸಿ ಪರೀಕ್ಷೆ
bangalore , ಸೋಮವಾರ, 28 ಜೂನ್ 2021 (18:11 IST)
ರಾಜ್ಯದ 10ನೇ ತರಗತಿ ವಿದ್ಯಾರ್ಥಿಗಳ ಹಾಗೂ ಪೋಷಕರ ಬಹುದಿನಗಳ ನಿರೀಕ್ಷೆಯಾಗಿದ್ದ 2020-21ನೇ ಸಾಲಿನ ಎಸ್ ಎಸ್ ಎಲ್ ಸಿ. ಪರೀಕ್ಷೆಗಳಿಗೆ ದಿನಾಂಕ ನಿಗದಿಪಡಿಸಲಾಗಿದ್ದು, ಜುಲೈ 19 ಮತ್ತು 22ರಂದು ಎರಡು ದಿನಗಳ ಕಾಲ ಈ ಪರೀಕ್ಷೆಗಳು ನಡೆಯಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. 
ಸೋಮವಾರ ಪರೀಕ್ಷೆ ಸಿದ್ಧತೆ ಕುರಿತು ಜಿಲ್ಲಾಧಿಕಾರಿಗಳು, ಜಿಪಂ ಸಿಇಒ, ಎಸ್‍ಪಿ, ಡಿಎಚ್‍ಒ, ಖಜಾನಾಧಿಕಾರಿಗಳು ಹಾಗೂ ಶಿಕ್ಷಣಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫೆರೆನ್ಸ್‍ನಲ್ಲಿ ಮಾರ್ಗದರ್ಶನ ನೀಡಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರೀಕ್ಷಾ ದಿನಾಂಕಗಳನ್ನು ಪ್ರಕಟಿಸಿ, ಪರೀಕ್ಷೆ ಕುರಿತು ಕೈಗೊಂಡಿರುವ ಸಿದ್ಧತೆಗಳನ್ನು ವಿವರಿಸಿದರು. 
 
ಜುಲೈ 19ರಂದು ಕೋರ್ ವಿಷಯಗಳಿಗೆ ಮತ್ತು 22ರಂದು ಭಾಷಾ ವಿಷಯಗಳ ಪರೀಕ್ಷೆಗಳು ನಡೆಯಲಿವೆ. ಬೆಳಗ್ಗೆ 10.30ಕ್ಕೆ ಪರೀಕ್ಷೆ ಆರಂಭಗೊಳ್ಳಲಿವೆ ಎಂದು ಸುರೇಶ್ ಕುಮಾರ್ ತಿಳಿಸಿದರು. 
ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ನಿರ್ದೇಶಿಸಿರುವ ಎಸ್‍ಒಪಿ ಪರಿಗಣಿಸಿ ಸುರಕ್ಷಿತ ವಾತಾವರಣದಲ್ಲಿ ಪರೀಕ್ಷೆಗಳನ್ನು ನಡೆಸಲು ಎಲ್ಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ಈ ಕುರಿತಂತೆ ವಿಡಿಯೋ ಕಾನ್ಫರೆನ್ಸ್‍ನಲ್ಲಿ ಮಾರ್ಗದರ್ಶನ ನೀಡಲಾಗಿದೆ. ಹಾಗೆಯೇ ಜಿಲ್ಲಾಧಿಕಾರಿಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಕೈಗೊಳ್ಳಬಹುದಾದ ಕ್ರಮಗಳ ಕುರಿತು ತಮ್ಮ ಶಂಕೆಗಳನ್ನು ನಿವಾರಿಸಿಕೊಂಡರು ಎಂದು ಸಚಿವರು ಹೇಳಿದರು.
 
ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಭಾಗವಹಿಸಿ ತಮ್ಮ ಇಲಾಖೆಯಿಂದ ಕೈಗೊಳ್ಳಬಹುದಾದ ಕ್ರಮಗಳನ್ನು ವಿವರಿಸಿದರು. ವಿಶೇಷವಾಗಿ ಪರೀಕ್ಷಾ ಪ್ರಕ್ರಿಯೆಯಲ್ಲಿ ನಿಯೋಜಿತರಾಗುವ ಎಲ್ಲ ಸಿಬ್ಬಂದಿಗೆ ತಕ್ಷಣವೇ ಕೋವಿಡ್ ಲಸಿಕೆ ಒದಗಿಸಲು ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದರು. 
 
ಪರೀಕ್ಷಾ ಕೇಂದ್ರಗಳು - ಸುರಕ್ಷಾ ಕೇಂದ್ರಗಳು:
ಪರೀಕ್ಷಾ ಕೇಂದ್ರಗಳು ಸುರಕ್ಷಾ ಕೇಂದ್ರಗಳಾಗಿರಲಿವೆ. ಪ್ರತಿದಿನವೂ ಪರೀಕ್ಷೆ ಆರಂಭಕ್ಕೂ ಮುನ್ನ ಮತ್ತು ಪರೀಕ್ಷೆ ನಂತರ ಸೋಂಕು ನಿವಾರಕ ದ್ರಾವಣದಿಂದ ಸ್ಥಳೀಯಾಡಳಿತ ಸಂಸ್ಥೆಗಳ ನೆರವಿನಿಂದ ಪರೀಕ್ಷಾ ಕೇಂದ್ರ, ಪರೀಕ್ಷಾ ಕೊಠಡಿ, ಪೀಠೋಪಕರಣ ಮತ್ತು ಶೌಚಾಲಯಗಳನ್ನು ಸ್ಯಾನಿಟೈಜೇಷನ್‌ ಮಾಡುವುದು, ಪರೀಕ್ಷಾ ಕೇಂದ್ರಕ್ಕೆ ಆಗಮನ ಮತ್ತು ನಿರ್ಗಮನ ಹಾಗೆಯೇ ಕೊಠಡಿ ಪ್ರವೇಶ ಸಮಯದಲ್ಲಿ ದೈಹಿಕ ಅಂತರ ಕಾಪಾಡಿಕೊಳ್ಳುವುದು. ಪರೀಕ್ಷಾ ಕೇಂದ್ರದ ಪ್ರವೇಶದ ಸಂದರ್ಭದಲ್ಲಿ ಮಕ್ಕಳ ಕೈಗೆ ಸ್ಯಾನಿಟೈಜ್‌ ಮಾಡುವುದು. ಪರೀಕ್ಷಾ ಕೊಠಡಿಯಲ್ಲಿ 12 ಮಕ್ಕಳಿರಬೇಕು. ಒಂದು ಡೆಸ್ಕ್‌ಗೆ ಒಬ್ಬ ಪರೀಕ್ಷಾ‌ರ್ಥಿ ಮಾತ್ರವೇ ಇರಬೇಕು. ಮಕ್ಕಳು ಯಾವ ಸಮಯದಲ್ಲೂ ಗುಂಪು ಗೂಡುವುದನ್ನು ತಡೆಯುವುದು. ಮನೆಯಿಂದ ನೀರಿನ ಬಾಟಲ್ ಮತ್ತು ಊಟದ ಡಬ್ಬಿ ತರುವುದಕ್ಕೆ ಅವಕಾಶ ಕಲ್ಪಿಸುವುದು. ಪರೀಕ್ಷಾ ಕೊಠಡಿಯಲ್ಲಿ ಮಳೆ ನೀರು ಇರುಚಲು ಸಿಂಪಡಿಸದಂತೆ ಕ್ರಮ ವಹಿಸುವುದು. ಗಾಮೀಣ ವಿಭಾಗದ ಅಭ್ಯರ್ಥಿಗಳು ಸಾಧ್ಯವಾದಷ್ಟು ತಾಲೂಕು ಕೇಂದ್ರಗಳಿಗೆ ಹೋಗದಂತೆ ಪರೀಕ್ಷಾ ಕೇಂದ್ರಗಳನ್ನು ರಚಿಸುವುದನ್ನು ಖಾತರಿಪಡಿಸಿಕೊಳ್ಳಬೇಕೆಂದು ಎಸ್.ಓ.ಪಿ ಯಲ್ಲಿ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
 
ವಿಶೇಷ ಕೊಠಡಿ: 
ಕೆಮ್ಮು, ನೆಗಡಿ, ಜ್ವರ ಮೊದಲಾದುವುಗಳಿಂದ ಬಳಲುತ್ತಿರುವ ಇಲ್ಲವೇ ಈ ಲಕ್ಷಣಗಳಿರುವ ಅಭ್ಯಥಿ೵ಗಳಿಗಾಗಿ ಕನಿಷ್ಠ 2 ಕೊಠಡಿಗಳನ್ನು ವಿಶೇಷ ಕೊಠಡಿಗಳನ್ನಾಗಿ ಕಾಯ್ದಿರಿಸಬೇಕೆಂದೂ ಸೂಚಿಸಲಾಗಿದೆ. ಪರೀಕ್ಷಾ ಕೇಂದ್ರದ ಪ್ರವೇಶವಾದೊಡನೆ ನೇರವಾಗಿ ಆರೋಗ್ಯ ತಪಾಸಣಾ ಕೌಂಟರ್‌ ಪ್ರವೇಶಿಸುವಂತೆ ನಿರ್ದೇಶಿಸುವುದು. ಆರೋಗ್ಯ ಕೌಂಟರ್‌ಗಳು ಬೆಳಗ್ಗೆ 8.30ಕ್ಕೆ ಅರಂಭವಾಗಿ ಪರೀಕ್ಷಾ ಪ್ರಕ್ರಿಯೆ ಮುಗಿಯುವ ತನಕ ತೆರದಿರಲಿವೆ. ಥರ್ಮಲ್  ಸ್ಕ್ಯಾನರ್‌, ಪ‌ಲ್ಸ್‌ ಆಕ್ಸಿಮೀಟರ್, ಪ್ರಥಮ ಚಿಕಿತ್ಸಾ ಪೆಟ್ಟಿಗೆಗಳಿರುವುದನ್ನು ಖಾತರಿಪಡಿಸಬೇಕೆಂದು ಸೂಚಿಸಲಾಗಿದೆ. ಮಾಸ್ಕ್ ಧರಿಸದ ವಿದ್ಯಾರ್ಥಿಗಳಿಗೆ ಆರೋಗ್ಯ ಕೌಂಟರ್‌ಗಳಲ್ಲೇ ಮಾಸ್ಕ್‌ ನೀಡಲಾಗುತ್ತದೆ ಎಂದು ಸುರೇಶ್‌ ಕುಮಾರ್ ತಿಳಿಸಿದ್ದಾರೆ.
ತುರ್ತು ಚಿಕಿತ್ಸಾ ವಾಹನ:
ಆರೋಗ್ಯ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಪ್ರತಿ ತಾಲೂಕಿಗೊಂದು ತುರ್ತು ಚಿಕಿತ್ಸಾ ವಾಹನವನ್ನು ಮೀಸಲಿಡುವುದು. ಪರೀಕ್ಷಾ ಸಿಬ್ಬಂದಿಯೂ ಯಾವುದೇ ಸಂದರ್ಭದಲ್ಲೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು. ಅಗತ್ಯ ಬಿದ್ದರೆ ಸಿಬ್ಬಂದಿ ಫೇಸ್ ಶೀಲ್ಡ್ ಬಳಸುವುದು. ಗಡಿ ಭಾಗದ ಪರೀಕ್ಷಾ ಕೇಂದ್ರಗಳಿಗೆ ಹೊರ ರಾಜ್ಯದಿಂದ ಬರುವ ಪರೀಕ್ಷಾ‌ರ್ಥಿಗಳಿಗೆ ಅನುವಾಗುವಂತೆ ಪರೀಕ್ಷೆಗಳ ದಿವಸದಂದು ರಾಜ್ಯದ ಗಡಿ ಪ್ರವೇಶಕ್ಕೆ ಜಿಲ್ಲಾಡಳಿತದ ಸಮನ್ವಯದೊಂದಿಗೆ ಕ್ರಮ ವಹಿಸಬೇಕು ಎಂದು ಸಚಿವರು ತಿಳಿಸಿದ್ದಾರೆ.
 
ಕೋವಿಡ್‌ ಕೇರ್‌ ಸೆಂಟರ್ ಸ್ಥಾಪನೆ: 
ಪರೀಕ್ಷಾರ್ಥಿಗಳಿಗೆ ಕೋವಿಡ್‌ ಪಾಸಿಟೀವ್ ಕಂಡು ಬಂದಿದ್ದರೆ ಅಂತಹ ಪರೀಕ್ಷಾರ್ಥಿಗೆ ತಾಲೂಕಿಗೊಂದು ಕೋವಿಡ್‌ ಕೇರ್‌ ಕೇಂದ್ರಗಳನ್ನು ಸ್ಥಾಪಿಸಿ ಅಲ್ಲಿಯೇ ಅವರಿಗೆ ಪರೀಕ್ಷೆ ಬರೆಯುವ ವ್ಯವಸ್ಥೆ ಮಾಡಲಾಗುತ್ತದೆ. ಕುಟುಂಬದಲ್ಲಿ ಯಾರಿಗಾದರೂ ಸೋಂಕು ತಗುಲಿದ್ದು, ಪರೀಕ್ಷಾರ್ಥಿ ಐಸೋಲೇಷನ್‌ನಲ್ಲಿದ್ದರೆ ಅವರನ್ನು ತಪಾಸಣೆ ನಡೆಸಿ ಆರೋಗ್ಯವಾಗಿರುವುದು ಕಂಡುಬಂದರೆ ಸಮೀಪದ ವಿದ್ಯಾರ್ಥಿ ಕೋವಿಡ್‌ ಕೇರ್‌ ಸೆಂಟರ್ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ. ಕೋವಿಡ್‌ ಆರೈಕೆ ಕೇಂದ್ರದಲ್ಲಿ ಒಂದು ಅಂಬುಲೆನ್ಸ್‌ ವಾಹನ ಕಾಯ್ದಿರಿಸಲಾಗುತ್ತದೆ ಎಂದು ಸುರೇಶ್‌ ಕುಮಾರ್ ತಿಳಿಸಿದ್ದಾರೆ. ‌
 
ಪರೀಕ್ಷಾ ಕೇಂದ್ರಕ್ಕೆ ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆ ರವಾನೆ, …

Share this Story:

Follow Webdunia kannada

ಮುಂದಿನ ಸುದ್ದಿ

ಮತ್ತೆ ರಮೇಶ್ ಜಾರಕಿಹೊಳಿ ಮುಂಬೈಗೆ