Publish Date: Fri, 07 Aug 2020 (13:32 IST)
Updated Date: Fri, 07 Aug 2020 (13:33 IST)
ಬೆಂಗಳೂರು : ಆಗಸ್ಟ್ 10ರಂದು ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ಆಗಸ್ಟ್ 10ರ ಮಧ್ಯಾಹ್ನ 3 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ, ಕೋವಿಡ್ ನಡುವೆ ನಡೆದಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆದಿದ್ದು, 8.5 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಹಾಗೇ ಎಸ್ ಎಂಎಸ್ ಮೂಲಕವೂ ಫಲಿತಾಂಶ ಲಭ್ಯವಾಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.