Select Your Language

Notifications

webdunia
webdunia
webdunia
webdunia

ಎಸ್‌ಎಸ್ಎಲ್‌ಸಿ ಪರೀಕ್ಷೆ ಸುಸೂತ್ರವಾಗಿ ಮುಗಿದಿದೆ-ಮೇ 2ನೇ ವಾರ ಫಲಿತಾಂಶ

ಎಸ್‌ಎಸ್ಎಲ್‌ಸಿ ಪರೀಕ್ಷೆ ಸುಸೂತ್ರವಾಗಿ ಮುಗಿದಿದೆ-ಮೇ 2ನೇ ವಾರ ಫಲಿತಾಂಶ
bangalore , ಸೋಮವಾರ, 11 ಏಪ್ರಿಲ್ 2022 (18:54 IST)
ರಾಜ್ಯದಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸುಸೂತ್ರವಾಗಿ ನಡೆದಿದೆ, ಮುಕ್ತಾಯಗೊಂಡಿವೆ ಎಂದು ಪ್ರಾಥಮಿಕ ಮತ್ತು ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ನಡೆಸಿದರು.
 
ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳ ಶೈಕ್ಷಣಿಕ ಪ್ರಗತಿ ಪರಿಶೀಲನೆಗಾಗಿ ವಿಜಯಪುರಕ್ಕೆ ಆಗಮಿಸಿರುವ ಸಚಿವರು, ಆಲಮಟ್ಟಿಯಲ್ಲಿ ಸೋಮವಾರ (ಏ.11) ಸುದ್ದಿಗಾರರ ಜೊತೆಗೂಡಿದೆ.
 
‘ಮಾ. 28ರಿಂದ ಆರಂಭವಾದ ಪರೀಕ್ಷೆ ರಾಜ್ಯದಾದ್ಯಂತ ಸುಸೂತ್ರವಾಗಿ ನಡೆದು, ಮುಕ್ತಾಯವಾಗಿದೆ. ಒಂದು ಪರೀಕ್ಷಾ ಕೇಂದ್ರದಲ್ಲಿ ಮಾತ್ರ ಪರೀಕ್ಷಾ ಅಕ್ರಮ ವರದಿಯಾಗಿದೆ. ಈ ಸಂಬಂಧ ಒಬ್ಬ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ’ ಎಂದು ಸಚಿವರು ತಿಳಿಸಿದರು.
 
‘ಮೊದಲ ಬಾರಿ ಪರೀಕ್ಷೆ ಬರೆಯುತ್ತಿರುವವರಲ್ಲಿ ಹಾಜರಾತಿ ಪ್ರಮಾಣ ಶೇ.98ಕ್ಕಿಂತ ಹೆಚ್ಚು ಇದೆ. ಆದರೆ, ಖಾಸಗಿ ಅಭ್ಯರ್ಥಿಗಳು ಮತ್ತು ಪುನರಾವರ್ತಿತ ಅಭ್ಯರ್ಥಿಗಳ ಸಂಖ್ಯೆಯಲ್ಲಿ ಗೈರು ಹಾಜರಾತಿ ಪ್ರಮಾಣ ಎಂದಿನಂತೆ ಮುಂದುವರೆದಿದೆ’ ಎಂದು ಸಚಿವರು ಮಾಹಿತಿ ನೀಡಿದರು.
 
‘ನಾಳೆಯಿಂದ (ಏ.12) ಕೀ ಉತ್ತರಗಳು, ಉತ್ತರಗಳಿಗೆ ಆಕ್ಷೇಪಣೆ ಕರೆಯುವುದು ಸೇರಿದಂತೆ ಇನ್ನಿತರ ಪ್ರಕ್ರಿಯೆಗಳು ಆರಂಭವಾಗುತ್ತವೆ. ಏಪ್ರಿಲ್ ಕೊನೆಯ ವಾರದಲ್ಲಿ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗುತ್ತದೆ. ಮೇ ಎರಡನೇ ವಾರದಲ್ಲಿ ಫಲಿತಾಂಶ ಪ್ರಕಟಿಸುವ ಗುರಿ ಹೊಂದಲಾಗಿದೆ. ಜೂನ್ 4ನೇ ವಾರದಲ್ಲಿ ಪೂರಕ ಪರೀಕ್ಷೆ ನಡೆಯಲಿದೆ’ ಎಂದು ಸಚಿವರು ಮಾಹಿತಿ ನೀಡಿದರು. 
 
'ಸಮವಸ್ತ್ರ ವಿಚಾರವಾಗಿ ಶಾಲೆಗಳಲ್ಲಿ ಯಾವುದೇ ಗೊಂದಲ ಉಂಟಾಗಿಲ್ಲ. ವಿದ್ಯಾರ್ಥಿಗಳು ಸಮವಸ್ತ್ರದಲ್ಲಿ ಹಾಜರಾಗಿ ಪರೀಕ್ಷೆ ಬರೆದಿದ್ದಾರೆ. ಅನಾರೋಗ್ಯದ ಲಕ್ಷಣಗಳು ಕಂಡುಬಂದರೆ ಅಂತಹ ಸಂದರ್ಭಗಳಲ್ಲಿ ಪರೀಕ್ಷೆ ಬರೆಯಲು ಕೊಠಡಿ ವ್ಯವಸ್ಥೆ ಕಲ್ಪಿಸಲಾಗಿದೆ. ಪರೀಕ್ಷೆಯ ಸಮಯದಲ್ಲಿ ಯಾವೊಬ್ಬ ವಿದ್ಯಾರ್ಥಿಗೂ ಕೋವಿಡ್ ಪಾಸಿಟಿವ್ ಬಂದಿಲ್ಲ' ಎಂದು ಸಚಿವ ನಾಗೇಶ್ ಮಾಹಿತಿ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೆಲೆ ಏರಿಕೆ ವಿರುದ್ಧ ಫ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ರಣಕಹಳೆ