Select Your Language

Notifications

webdunia
webdunia
webdunia
webdunia

ಇಂದು ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರ

ಇಂದು ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರ
ಬೆಂಗಳೂರು , ಸೋಮವಾರ, 16 ಮೇ 2016 (10:39 IST)
ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್‍ ಇಂದು ಸುದ್ದಿಗೋಷ್ಠಿ ನಡೆಸಿ ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟಿಸಲಿದ್ದಾರೆ ಎಂದು ಎಸ್‍ಎಸ್‍ಎಲ್‍ಸಿ ಬೋರ್ಡ್‌ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. 
 
ಇಂದು ಮಧ್ಯಾಹ್ನ 3 ಗಂಟೆಯ ನಂತರ (http://kseeb.kar.nic.in/) ವೆಬ್‌ಸೈಟ್‌ನಲ್ಲಿ ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಗಲಿದ್ದು, ಲಭ್ಯವಾಗಲಿದ್ದು, ನಾಳೆ ಆಯಾ ಶಾಲೆಗಳಲ್ಲಿ ಫಲಿತಾಂಶ ಲಭ್ಯವಾಗಲಿದೆ. 
 
ಪ್ರಸಕ್ತ ಸಾಲಿನ ಮಾರ್ಚ್ 30 ರಿಂದ ಎಪ್ರಿಲ್ 13 ರವರೆಗೆ ಎಸ್‌ಎಸ್ಎಲ್‌ಸಿ ಪರೀಕ್ಷೆ ನಡೆದಿತ್ತು. ರಾಜ್ಯದ 3,082 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 8,49,233 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ  

Share this Story:

Follow Webdunia kannada

ಮುಂದಿನ ಸುದ್ದಿ

ಮತದಾರರಿಗೆ ಭರ್ಜರಿ ಆಫರ್‌: ವೋಟ್‌ ಮಾಡಿ, ಸಿನಿಮಾ ನೋಡಿ