Publish Date: Tue, 30 Apr 2019 (13:45 IST)
Updated Date: Tue, 30 Apr 2019 (13:47 IST)
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದ್ದು ಶೇ.73.2 ರಷ್ಟು ವಿದ್ಯಾರ್ಥಿಗಳು ಉತೀರ್ಣರಾಗಿದ್ದಾರೆ.
ಇಬ್ಬರು ವಿದ್ಯಾರ್ಥಿಗಳು ಶೇ.100 ರಷ್ಟು ಫಲಿತಾಂಶ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. 11 ವಿದ್ಯಾರ್ಥಿಗಳು 625 ಅಂಕಗಳಿಗೆ 624 ಅಂಕಗಳನ್ನು ಪಡೆದಿದ್ದಾರೆ.
ರಾಜ್ಯದಲ್ಲಿಯೇ ಹಾಸನ ಜಿಲ್ಲೆ ಮೊದಲ ಸ್ಥಾನ ಪಡೆದಿದ್ದು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳನ್ನು ಮೀರಿಸಿದೆ.ಈ ವರ್ಷ ಶೇ.79.59 ವಿದ್ಯಾರ್ಥಿನಿಯರು ಮತ್ತು ಶೇ.68.46 ವಿದ್ಯಾರ್ಥಿಗಳು ಉತೀರ್ಣರಾಗಿದ್ದಾರೆ.
ನಗರ ಪ್ರದೇಶದ ಶೇ.70.05 ರಷ್ಟು ವಿದ್ಯಾರ್ಥಿಗಳು ಉತೀರ್ಣರಾಗಿದ್ದರೆ ಗ್ರಾಮೀಣ ಪ್ರದೇಶದ ಶೇ.76.62 ವಿದ್ಯಾರ್ಥಿಗಳು ಉತೀರ್ಣರಾಗಿದ್ದಾರೆ.