Publish Date: Wed, 11 Feb 2026 (16:47 IST)
Updated Date: Wed, 11 Feb 2026 (16:51 IST)
ಬೀದರ್: ಪರೀಕ್ಷೆಗೆ ಹೆದರಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ನಾರಾಯಣಪುರ ಗ್ರಾಮದ ನವೋದಯ ವಸತಿ ಶಾಲೆಯಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಮಂಠಾಳ ಗ್ರಾಮದ ಶರತ್ (16) ಎಂದು ಗುರುತಿಸಲಾಗಿದೆ. ನವೋದಯ ವಸತಿ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ ಎಂದು ತಿಳಿದುಬಂದಿದೆ.
ಇನ್ನೂ ಸಾವಿಗೂ ಮುನ್ನಾ ಡೆತ್‌ನೋಟ್ ಬರೆದಿದ್ದು, ಇದೀಗ ಪತ್ತೆಯಾದ ಡೆತ್‌ನೋಟ್‌ನಲ್ಲಿ ಮಮ್ಮಿ Sorry… ಅಪ್ಪ I Love You ಹಾಗೂ Keep Smile Forever ಎಂದು ಬರೆದಿದ್ದಾನೆ.
ಸ್ಥಳಕ್ಕೆ ಬಸವಕಲ್ಯಾಣ ನಗರ ಪೊಲೀಸ್ ಠಾಣೆ ಪಿಎಸ್‌ಐ ಚಂದ್ರಶೇಖರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಮುಂಬರುವ ಪರೀಕ್ಷೆಗೆ ಹೆದರಿ ವಿದ್ಯಾರ್ಥಿ ಆತ್ಮಹತ್ಯೆ ಶರಣಾಗಿದ್ದಾನೆ ಎಂದು ಶಂಕಿಸಲಾಗಿದೆ. ಸದ್ಯ ವಿದ್ಯಾರ್ಥಿ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ವಸತಿ ಶಾಲೆಯ ಮುಂಭಾಗದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.