Publish Date: Sun, 27 Mar 2022 (17:38 IST)
Updated Date: Sun, 27 Mar 2022 (18:40 IST)
ಎಸ್ ಎಸ್ ಎಲ್ ಸಿ ಪರೀಕ್ಷೆಯ ಆತಂಕದಲ್ಲಿರುವ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಬಿಸಿ ನಾಗೇಶ್ ಧೈರ್ಯ ತುಂಬಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆಯಿಂದ ಪರೀಕ್ಷೆ ಶುರು ಆಗಲಿದ್ದು, ಮಕ್ಕಳಿಗೆ ಯಾವುದೇ ರೀತಿಯ ಆತಂಕ ಬೇಡ.
80 % ಮುಗಿದಿರುವ ಸಿಲಾಬಸ್ನಲ್ಲಿಯೇ ಪ್ರಶ್ನೆ ಪತ್ರಿಕೆ ಬರುತ್ತದೆ. ಈ ಸಾರಿ ಪ್ರಶ್ನೆ ಪತ್ರಿಕೆಯಲ್ಲಿ ಆಯ್ಕೆಗಳನ್ನು ಜಾಸ್ತಿ ನೀಡಲಾಗುತ್ತದೆ. ಪಠ್ಯ ಮುಗಿಯದೇ ಇರುವ ಶಾಲೆಯ ವಿದ್ಯಾರ್ಥಿಗಳಿಗೆ ಬೇರೆ ಪ್ರಶ್ನೆ ಆಯ್ಕೆಮಾಡುವ ಅವಕಾಶ ಇದೆ. ಹಾಗಾಗಿ ಧೈರ್ಯವಾಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಿರಿ ಎಂದರು. ಇನ್ನೂ ಹಿಜಾಬ್ ವಿವಾದ ಪ್ರಕರಣ ಸುಪ್ರೀಂ ಕೋರ್ಟ್ನಲ್ಲಿದೆ. ಕರ್ನಾಟಕ ಹೈಕೋರ್ಟ್ ರಾಜ್ಯದ ಆದೇಶವನ್ನ ಎತ್ತಿಹಿಡಿದಿದೆ. ಶಾಲೆ ಸೂಚಿಸಿದ ಸಮವಸ್ತ್ರವನ್ನೇ ವಿದ್ಯಾರ್ಥಿಗಳು ಧರಿಸಬೇಕು. ನಾಳೆಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಿಜಾಬ್ ಧರಿಸುವಂತಿಲ್ಲ. ಹೊರಗಿನ, ರಿಪಿಟರ್ಸ್ಗೆ ಸಮವಸ್ತ್ರದ ಅವಶ್ಯಕತೆಯಿಲ್ಲ. ನಾಳೆ ಸುಸೂತ್ರವಾಗಿ ಪರೀಕ್ಷೆಗಳು ನಡೆಯುತ್ತದೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿದ್ದಾರೆ.