Daily Horoscope

ಎಸ್ ಎಸ್ ಎಲ್ ಸಿ ಓದುತ್ತಿದ್ದ ಅವನಲ್ಲ… ಅವಳು..!

Webdunia
ಸೋಮವಾರ, 29 ಅಕ್ಟೋಬರ್ 2018 (15:27 IST)
ಎಂಟು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಬಾಲಕ ತೃತಿಯ ಲಿಂಗಿಯಾಗಿ ಬದಲಾಗಿ ಪತ್ತೆಯಾಗಿರುವ ಘಟನೆ ನಡೆದಿದೆ.
ಸಕ್ಕರೆ ನಾಡು ಮಂಡ್ಯದಲ್ಲಿ ಈ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಹಕ್ಕಿಮಂಚನಹಳ್ಳಿಯ ಚಂದನ್ ಕುಮಾರ್ (16)  ತೃತೀಯ ಲಿಂಗಿಯಾಗಿ ಪರಿವರ್ತನೆಗೊಂಡು ಪತ್ತೆಯಾಗಿದ್ದಾನೆ.

ಬೆಂಗಳೂರಿನ ತನ್ನ ಚಿಕ್ಕಮ್ಮನ ಮನೆಯಲ್ಲಿ ಇದ್ದುಕೊಂಡು ವಿದ್ಯಾನಗರದ ಬಿಬಿಎಂಪಿ ಹೈಸ್ಕೂಲ್ ನಲ್ಲಿ ಹತ್ತನೇ  ತರಗತಿ ವಿದ್ಯಾಬ್ಯಾಸ ಮಾಡತ್ತಿದ್ದ. 8 ತಿಂಗಳ ಹಿಂದೆ ರಜೆಗೆಂದು ಸ್ವಗ್ರಾಮ ಹಕ್ಕಿಮಂಚನಹಳ್ಳಿಗೆ ಬಂದು, ರಜೆ ಮುಗಿದ ಬಳಿಕ ಪೋಷಕರು ಕೆ.ಆರ್.ಪೇಟೆ ಸರ್ಕಾರಿ ಬಸ್ ನಿಲ್ದಾಣದಲ್ಲಿ ಬೆಂಗಳೂರಿಗೆ ಚಂದನ್ ಅನ್ನ ಬಸ್ ಹತ್ತಿಸಿದ್ರು.

ಆದ್ರೆ ಅಂದಿನಿಂದ ಚಂದನ್ ನಾಪತ್ತೆಯಾಗಿದ್ದ. ಆತನ ಪೋಷಕರು ಕೆ.ಆರ್.ಪೇಟೆ ಪೊಲೀಸ್ ಠಾಣೆಗೆ ನಾಪತ್ತೆ ದೂರು ದಾಖಲಿಸಿದ್ರು. ಆದ್ರೆ ಕೆ.ಆರ್.ಪೇಟೆ ಪಟ್ಟಣದ ಬಿ.ಬಿ.ರಸ್ತೆಯ ಅಂಗಡಿಗಳಲ್ಲಿ ಇಬ್ಬರು ಮಂಗಳಮುಖಿಯರೊಂದಿಗೆ ಭಿಕ್ಷಾಟನೆ ಮಾಡುತ್ತಿದ್ದ ವೇಳೆ ಪತ್ತೆಯಾಗಿದ್ದಾನೆ. ಗ್ರಾಮದ ಕೆಲವರು ಚಂದನ್ ಅನ್ನು ಗುರುತಿಸಿ ಮಾತನಾಡಲು ಪ್ರಯತ್ನಿಸಿದ್ದಾರೆ. ಆದ್ರೆ ಇದನ್ನ ಗಮನಿಸಿದ ಜೊತೆಯಲ್ಲಿದ್ದ ಮಂಗಳಮುಖಿಯರು ಚಂದನ್ ನನ್ನು ಆಟೋದಲ್ಲಿ ಕರೆದೋಯ್ಯಲು ಯತ್ನಿಸಿದ್ದಾರೆ. ಆದ್ರೆ ಅವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸದ್ಯ ಇಬ್ಬರು ಮಂಗಳ ಮುಖಿರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಪೋಷಕರು ಮಾತ್ರ ತಮ್ಮ ಮಗನನ್ನು ಮಂಗಳಮುಖಿಯರೇ ಅಪಹರಿಸಿ ಲಿಂಗ ಪರಿವರ್ತನೆ ಮಾಡಿಸಿದ್ದಾರೆಂದು ಆರೋಪಿಸುತ್ತಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ