Webdunia - Bharat's app for daily news and videos

Install App

ಬಿಜೆಪಿಯ 8 ಶಾಸಕರು ಕಾಂಗ್ರೆಸ್ ಸೇರಲು ರೆಡಿ: ಎಸ್ ಟಿ ಸೋಮಶೇಖರ್ ಬಾಂಬ್

Krishnaveni K
ಶುಕ್ರವಾರ, 25 ಅಕ್ಟೋಬರ್ 2024 (10:23 IST)
ಬೆಂಗಳೂರು: ಬಿಜೆಪಿ ತೊರೆಯಲು ಸಜ್ಜಾಗಿರುವ ಶಾಸಕ ಎಸ್ ಟಿ ಸೋಮಶೇಖರ್ ಇದೀಗ ಬಿಜೆಪಿಯ ಮತ್ತೆ 8 ಶಾಸಕರು ಕಾಂಗ್ರೆಸ್ ಸೇರಲು ರೆಡಿಯಾಗಿದ್ದಾರೆ ಎಂದು ಬಾಂಬ್ ಸಿಡಿಸಿದ್ದಾರೆ.

ಬಿಜೆಪಿ ಶಾಸಕರಾಗಿರುವ ಎಸ್ ಟಿ ಸೋಮಶೇಖರ್ ಈಗಾಗಲೇ ಕಾಂಗ್ರೆಸ್ ಜೊತೆ ಗುರುತಿಸಿಕೊಂಡಿದ್ದಾರೆ. ಕಾಂಗ್ರೆಸ್ ನ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದಾರೆ. ವಿಧಾನಪರಿಷತ್ ಚುನಾವಣೆಯಲ್ಲೂ ಕಾಂಗ್ರೆಸ್ ಪರ ಮತ ಚಲಾಯಿಸಿದ್ದರು. ಈ ಮೂಲಕ ಕಾಂಗ್ರೆಸ್ಸಿಗರೇ ಆಗಿದ್ದಾರೆ.

ಈ ಹಿಂದೆ ದೋಸ್ತಿ ಸರ್ಕಾರವಿದ್ದಾಗ ಕಾಂಗ್ರೆಸ್ ನಲ್ಲಿದ್ದ ಎಸ್ ಟಿ ಸೋಮಶೇಖರ್ ಬಳಿಕ ಬಿಜೆಪಿ ಸೇರಿಕೊಂಡು ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿಯೂ ಇದ್ದರು. ಆದರೆ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಮತ್ತೆ ಮಾತೃ ಪಕ್ಷಕ್ಕೆ ಹಾರಿದ್ದಾರೆ. ಬಿಜೆಪಿಯಿಂದ ಶಾಸಕನಾಗಿ ಆಯ್ಕೆಯಾದರೂ ಕಾಂಗ್ರೆಸ್ ಗೆ ನಿಷ್ಠೆ ತೋರಿಸಿದ್ದಾರೆ.

ಇದೀಗ ತಮ್ಮ ಜೊತೆ ಇನ್ನೂ 8 ಶಾಸಕರು ಕಾಂಗ್ರೆಸ್ ಸೇರಲು ರೆಡಿಯಾಗಿರುವುದಾಗಿ ಹೇಳಿದ್ದಾರೆ. ‘ನನ್ನ ಮೇಲೆ ಶಿಸ್ತು ಕ್ರಮ ಕೈಗೊಂಡರೂ ನನಗೆ ಭಯವಿಲ್ಲ. ನನಗೆ ನನ್ನ ಕ್ಷೇತ್ರದ ಅಭಿವೃದ್ಧಿಯೇ ಮುಖ್ಯ. ಅದಕ್ಕಾಗಿ ಆಗಾಗ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾಗುತ್ತಿರುತ್ತೇನೆ. ಆರ್ ಅಶೋಕ್ ಮಾತಿಗೆಲ್ಲ ಬೆಲೆ ಕೊಡಲ್ಲ. ಸದ್ಯದಲ್ಲೇ 8 ಬಿಜೆಪಿ ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ’ ಎಂದು ಎಸ್ ಟಿ ಸೋಮಶೇಖರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments