Select Your Language

Notifications

webdunia
webdunia
webdunia
webdunia

ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ಹತ್ಯೆ

ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ಹತ್ಯೆ
bangalore , ಮಂಗಳವಾರ, 21 ಮಾರ್ಚ್ 2023 (18:40 IST)
ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಮೇಡಿಮಲ್ಲಸಂದ್ರ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ಇಸ್ಮಾಯಿಲ್ ಖಾನ್ ಎಂಬಾತನನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಸಯ್ಯದ್ ಹಿದಾಯತ್ ಶಾ, ಸಯ್ಯದ್ ಅಜೀಂ ಶಾ, ಸಯ್ಯದ್ ಅಖಿಲ್ ಶಾ ಎಂಬುವರೆ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಕಳೆದ ಹಲವು ದಿನಗಳಿಂದ ದಾಯಾದಿಗಳ ಮಧ್ಯೆ ಆಸ್ತಿ ವಿಚಾರಕ್ಕೆ ಕಲಹ ನಡೆಯುತ್ತಿದ್ದು, ಈ ನಡುವೆ ಮನೆ ಮುಂದೆ ಕಳೆದ ರಾತ್ರಿ ಕಾರು ನಿಲ್ಲಿಸುವ ವಿಚಾರಕ್ಕೆ ಕಿರಿಕ್​ ಆಗಿದೆ. ಬಳಿಕ ಮಾತಿನ‌ ಚಕಮಕಿ ವಿಕೋಪಕ್ಕೆ ತಿರುಗಿ ಡ್ಯಾಗರ್​​ನಿಂದ ಎದೆ ಮತ್ತು ಮೂತ್ರಪಿಂಡ ಜಾಗಕ್ಕೆ ಇರಿದು ಹಲ್ಲೆ ಮಾಡಲಾಗಿದ್ದು, ಸ್ಥಳದಲ್ಲೇ ಇಸ್ಮಾಯಿಲ್ ಖಾನ್ ಸಾವನ್ನಪ್ಪಿದ್ದಾನೆ. ಅನುಗೊಂಡನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇನ್ನು ಕೊಲೆ ನಂತರ ಆರೋಪಿಗಳು ಎಸ್ಕೇಪ್ ಆಗಿದ್ದು. ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ

Share this Story:

Follow Webdunia kannada

ಮುಂದಿನ ಸುದ್ದಿ

ಸ್ಥಳೀಯರಿಗೆ BJP ಟಿಕೆಟ್​ ನೀಡುವಂತೆ ಮನವಿ