Publish Date: Mon, 29 Aug 2022 (13:07 IST)
Updated Date: Mon, 29 Aug 2022 (13:10 IST)
ಬೆಂಗಳೂರು : ರಾಜ್ಯದೆಲ್ಲೆಡೆ ಸುರಿಯುತ್ತಿರುವ ಭಾರೀ ಮಳೆಗೆ ಅವಾಂತರಗಳು ಸೃಷ್ಟಿಯಾಗಿವೆ.
ಈ ಬಗ್ಗೆ 16 ಜಿಲ್ಲೆಗಳಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದು ಪರಿಸ್ಥಿತಿಯನ್ನು ಸರಿಪಡಿಸಲು ಸೂಚನೆ ನೀಡಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಬೊಮ್ಮಾಯಿ, ಬೆಂಗಳೂರು-ಮೈಸೂರು ಹೆದ್ದಾರಿ ರಸ್ತೆ ಅವಾಂತರದ ಬಗ್ಗೆ ಮಾಹಿತಿ ಪಡೆದಿದ್ದೇನೆ. ಅಲ್ಲಲ್ಲಿ ನೀರು ನಿಂತಿರುವುದರಿಂದ, ವಾಹನಗಳಿಗೆ ಹೋಗಲು ಅನುಕೂಲವಾಗುವಂತೆ ಪರ್ಯಾಯ ಮಾರ್ಗಕ್ಕೆ ಎಸ್ಪಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ಆಯಾಯ ಡಿಸಿಗಳ ಜೊತೆ ಚರ್ಚೆ ಮಾಡಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತ ನೀರನ್ನು ತೆರವುಗೊಳಿಸಲು ಸೂಚನೆ ನೀಡಲಾಗಿದೆ. ಮೈಸೂರು ಡಿಸಿ ಹಾಗೂ ಉತ್ತರ ಕರ್ನಾಟಕ ಭಾಗಗಳಲ್ಲೂ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.