Select Your Language

Notifications

webdunia
webdunia
webdunia
Thursday, 3 April 2025
webdunia

ವಿಕಸಿತ ಭಾರತ ನಿರ್ಮಾಣಕ್ಕಾಗಿ ನಮ್ಮ ಹಕ್ಕು ಚಲಾಯಿಸಿದೆವು: ಡಾ.ಮಂಜುನಾಥ್

LokhSabha Election 2024

Sampriya

ಬೆಂಗಳೂರು , ಶುಕ್ರವಾರ, 26 ಏಪ್ರಿಲ್ 2024 (14:10 IST)
Photo Courtesy X
ಬೆಂಗಳೂರು: ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಶಾಂತಿಯುತವಾಗಿ ನಡೆಯುತ್ತಿದ್ದು, 14 ಬಿಸಿಲನ್ನು ಲೆಕ್ಕಿಸದೆ ಸಾಮಾನ್ಯ ಜನರು, ಸಿನಿಮಾರಂಗದವರು, ಕ್ರೀಡಾ ಪಟುಗಳು ಸೇರಿದಂತೆ ರಾಜಕೀಯ ನಾಯಕರು ಬೆಳಗ್ಗಿನಿಂದಲೇ ಮತದಾನ ಮಾಡಲು ಬಂದರು.

ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಮಂಜುನಾಥ್ ಅವರು ತಮ್ಮ ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದರು.

ಈ ಬಗ್ಗೆ ಎಕ್ಸ್‌ನಲ್ಲಿ ಫೋಟೋ ಹಂಚಿ ‘ವಿಕಸಿತ ಭಾರತ ನಿರ್ಮಾಣಕ್ಕಾಗಿ ನಮ್ಮ ಹಕ್ಕು ಚಲಾಯಿಸಿದೆವು’ ಎಂದು ಬರೆದುಕೊಂಡಿದ್ದಾರೆ.  


‘ವಿಕಸಿತ ಭಾರತ ನಿರ್ಮಾಣಕ್ಕಾಗಿ ನಮ್ಮ ಹಕ್ಕು ಚಲಾಯಿಸಿದೆವು’

ನಾನು ಮತ್ತು ಧರ್ಮಪತ್ನಿ ಡಾ. ಅನಸೂಯಾ ಮಂಜುನಾಥ್ ಹಾಗೂ ಮಕ್ಕಳು ಇಂದು ಪದ್ಮನಾಭ ನಗರದಲ್ಲಿ ಮತಚಲಾಯಿಸಿದೆವು. ವಿಕಸಿತ ಭಾರತದ ನಿರ್ಮಾಣಕ್ಕಾಗಿ ಇಂದು ಎಲ್ಲರೂ ತಪ್ಪದೇ ಮತದಾನ ಮಾಡಿ.

ನಿಮ್ಮ ಒಂದೊಂದು ಮತವೂ ಭಾರತದ ಅಭ್ಯುದಯಕ್ಕೆ ಅಡಿಪಾಯವಾಗಲಿದೆ. ಇಂದು ಹಾಗೂ ಮೇ ಏಳರಂದು ಈ ಬಾರಿ ಕರ್ನಾಟಕದಲ್ಲಿ ದಾಖಲೆಯ ಸಂಖ್ಯೆಯಲ್ಲಿ ಮತ ಚಲಾಯಿಸೋಣ.

ಉಜ್ವಲ ಭಾರತದ ನಿರ್ಮಾಣಕ್ಕೆ ನಾಂದಿ ಹಾಡೋಣ.

Share this Story:

Follow Webdunia kannada

ಮುಂದಿನ ಸುದ್ದಿ

ಸಂಗಡಿಗರೊಂದಿಗೆ ಬಂದು ಮತ ಚಲಾಯಿಸಿದ ಮೈಸೂರು ಸಂಸದ ಪ್ರತಾಪ್ ಸಿಂಹ